ಬಂಧಿತ ಆರೋಪಿಗಳು 
ರಾಜ್ಯ

ಸಂಗೀತಗಾರನ ಮನೆಗೆ ನುಗ್ಗಿ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳ ಬಂಧನ

ಸಂಗೀತರೊಬ್ಬರ ಮನೆಗೆ ನುಗ್ಗಿ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 12 ರಂದು ಈ ಘಟನೆ ನಡೆದಿತ್ತು. ಖಚಿತ ಮಾಹಿತಿ ಮೇರೆಗೆ ವಿವೇಕನಗರದಲ್ಲಿ ಆರೋಪಿಗಳನ್ನು ಬುಧವಾರ ಬಂಧಿಸಲಾಗಿದೆ.

ಬೆಂಗಳೂರು: ಸಂಗೀತರೊಬ್ಬರ ಮನೆಗೆ ನುಗ್ಗಿ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 12 ರಂದು ಈ ಘಟನೆ ನಡೆದಿತ್ತು. ಖಚಿತ ಮಾಹಿತಿ ಮೇರೆಗೆ ವಿವೇಕನಗರದಲ್ಲಿ ಆರೋಪಿಗಳನ್ನು ಬುಧವಾರ ಬಂಧಿಸಲಾಗಿದೆ.

ನಿಖಿಲ್ ಬಿಎಸ್ (22) ಸ್ಟೆಪೇನ್ ರಾಜ್ (25) ವೇಣು ಯಾದವ್ (22) ಮತ್ತು ಪ್ರೇಮ್ (26) ಬಂಧಿತ ಆರೋಪಿಗಳು. ಇವರೆಲ್ಲಾ ಕಮನಹಳ್ಳಿ ಹಾಗೂ ಹೊರಮಾವಿನ ನಿವಾಸಿಗಳು.

ಸಂಗೀತಗಾರ ಮಧುಪನ್ ಎಂಬವರನ್ನು ಅಪಹರಿಸಿದ ಆರೋಪಿಗಳು , ಅವರ ಮನೆಗೆ ಎಳೆದುಕೊಂಡು ಹೋಗಿ ಲ್ಯಾಪ್ ಟಾಪ್, ಮೊಬೈಲ್ ಪೋನ್ ಮತ್ತು 10 ಸಾವಿರ ನಗದನ್ನು ದೋಚಿದ್ದಾರೆ.
ನಂತರ ಎಟಿಎಂ ಕಾರ್ಡ್ ಕಿತ್ತುಕೊಂಡು ಪಿನ್ ನಂಬರ್ ಗಾಗಿ ಒತ್ತಾಯಿಸಿದ್ದಾರೆ. ಇದಕ್ಕೆ ಆತ ನಿರಾಕರಿಸಿದಾಗ ಅವರನ್ನು ಕಾರಿನಲ್ಲಿ ಕುಳಿರಿಸಿಕೊಂಡು ದೂರ ಕರೆದುಕೊಂಡು ಹೋಗಿದ್ದು, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪಿನ್ ನಂಬರ್ ಮರೆತಿರುವುದಾಗಿ ಮಧುಪನ್ ಹೇಳಿದ ನಂತರ  ಕೆಆರ್ ಪುರಂ ಬಳಿಯ ಅವಲಹಳ್ಳಿ ಬಳಿ ಕಾರಿನಿಂದ ತಳ್ಳಿದ್ದಾರೆ
ಇದನ್ನು ನೋಡಿದ ದಾರಿಹೋಕರು ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ. ನಂತರ ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿದೆ. ಮಧುಪನ್ ನೀಡಿದ ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.
ಈ ಆರೋಪಿಗಳು ನಗರದಲ್ಲಿ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದು, ಅವರಿಂದ ಐದು ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT