ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದ ಮನವಿಗೆ ಸ್ಪಂದಿಸಿದ ಮಹಾರಾಷ್ಟ್ರ ಸರ್ಕಾರಕ್ಕೆ ಧನ್ಯವಾದ ಹೇಳಿದ ಸಿಎಂ ಎಚ್ ಡಿಕೆ

ಉತ್ತರ ಕರ್ನಾಟಕ ಭಾಗದ ಬರ ಪರಿಸ್ಥಿತಿಗೆ ಸ್ಪಂದಿಸಿ ನೀರು ಹರಿಸಲು ಸಮ್ಮತಿ ಸೂಚಿಸಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಎಚ್ ಡಿಕುಮಾರಸ್ವಾಮಿ ಧನ್ಯವಾದ ಹೇಳಿದ್ದಾರೆ.

ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಬರ ಪರಿಸ್ಥಿತಿಗೆ ಸ್ಪಂದಿಸಿ ನೀರು ಹರಿಸಲು ಸಮ್ಮತಿ ಸೂಚಿಸಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಎಚ್ ಡಿಕುಮಾರಸ್ವಾಮಿ ಧನ್ಯವಾದ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿಎಂ,  'ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರ ಸಮ್ಮತಿಸಿದ್ದು ಇನ್ನೆರಡು ದಿನಗಳಲ್ಲಿ ನೀರು ಬರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದೆ. ತೀವ್ರ ಬರಗಾಲದಿಂದ ಕುಡಿಯುವ ನೀರಿನ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಮನವಿಗೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ ನೀರು ಹರಿಸಲು ಕ್ರಮ ಕೈಗೊಂಡಿದೆ ಎಂದು ಟ್ವೀಟ್ ಮಾಡಿದ್ದಾರೆ.
ತೀವ್ರ ಬರಗಾಲದಿಂದ ಕುಡಿಯುವ ನೀರಿನ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಮನವಿಗೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ ನೀರು ಹರಿಸಲು ಕ್ರಮ ಕೈಗೊಂಡಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೀವ್ರ ಬರಗಾಲದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರಗಳನ್ನು ಬರೆದು ನೀರು ಹರಿಸಲು ಮನವಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ