ಸಂಗ್ರಹ ಚಿತ್ರ 
ರಾಜ್ಯ

ದಾವಣಗೆರೆ: ಮದುವೆಯಾದ 11ನೇ ದಿನವೇ ನವವಧು ನೇಣಿಗೆ ಶರಣು

ಮದುವೆಯಾಗಿ ಕೇವಲ 11 ದಿನಕ್ಕೇ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ: ಮದುವೆಯಾಗಿ ಕೇವಲ 11 ದಿನಕ್ಕೇ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಭಾನುವಾರ ದಾವಣಗೆರೆ ಕೆಟಿಜೆ ನಗರದಲ್ಲಿ ನವವಿವಾಹಿತೆಯಾದ ಶಿಲ್ಪಾ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಕೆ ಚಿತ್ರದುರ್ಗದ ಕೋಣುರು ಗ್ರಾಮದವರಾಗಿದ್ದು ಇದೇ ಗ್ರಾಮದ ಮಂಜು ಎಂಬುವವರೊಡನೆ ಹನ್ನೊಂದು ದಿನಗಳ ಹಿಂದೆ ಮದುವೆಯಾಗಿದ್ದರು. 
ಆತ್ಮಹತ್ಯೆಗೆ ಶರನಾದ ವಧುವಿನ ಕೈಮೇಲೆ ನಾಲ್ವರ ಹೆಸರು ಬರೆದುಕೊಂಡಿರುವುದು ಪತ್ತೆಯಾಗಿದೆ. ಇದರ ಹಿಂದೆಯೇ ಹಲವು ಅನುಮಾನಗಳು ಮೂಡಿವೆ.
ಆಕೆ ತನ್ನ ಕೈಮೇಲೆ ಪತಿ ಮಂಜು, ಅವರ ಸಂಬಂಧಿಗಳಾದ ಕಲ್ಲೇಶ್, ಬಸಪ್ಪ ಹಾಗೂ ಸಂತೋಷ್  ಎಂಬುವವರ ಹೆಸರು ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇನ್ನು ಆತ್ಮಹತ್ಯೆ ಮಾಡಿಕೊಂಡಿರುವ ಶಿಲ್ಪಾ ಹಾಗೂ ಮಂಜು ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿದ್ದು ಅಂತರ್ಜಾತಿ ವಿವಾಹವಾಗಿರುವ ಕಾರಣ ತಮ್ಮ ಮಗಳನ್ನು ಹತ್ಯೆ ಮಾಡಲಾಗಿದೆ ಎಂದು ಶಿಲ್ಪಾ ಪೋಷಕರು ಆರೋಪಿಸಿದ್ದಾರೆ.
ಕೆಟಿಜೆ ಠಾಣಾ ಪೋಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video