ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅತ್ತಿಬೆಲೆಯಲ್ಲಿ ಯುವಕನೋರ್ವನ ಬರ್ಬರ ಹತ್ಯೆ

ಅತ್ತಿಬೆಲೆಯಲ್ಲಿನ ನಿರ್ಜನ ಪ್ರದೇಶವೊಂದರಲ್ಲಿ 35 ವರ್ಷದ ಯುವಕನೋರ್ವನ ಅಪರಿಚತ ಶವ ಕಳೆದ ರಾತ್ರಿ ಪತ್ತೆಯಾಗಿದೆ. ಆತ ಕೆಲಸಕ್ಕಾಗಿ ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಅತ್ತಿಬೆಲೆಯಲ್ಲಿನ ನಿರ್ಜನ ಪ್ರದೇಶವೊಂದರಲ್ಲಿ 35 ವರ್ಷದ ಯುವಕನೋರ್ವನ  ಅಪರಿಚತ ಶವ  ಕಳೆದ ರಾತ್ರಿ ಪತ್ತೆಯಾಗಿದೆ.  ಆತ ಕೆಲಸಕ್ಕಾಗಿ ತಮಿಳುನಾಡಿನಿಂದ  ಬೆಂಗಳೂರಿಗೆ ಬಂದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತಪಟ್ಟ ಯುವಕ ಈ ಹಿಂದೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಗ್ಗೆ ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ದುಷ್ಕರ್ಮಿಗಳು ಕಲ್ಲಿನಿಂದ ತಲೆ ಜಜ್ಜಿದ್ದಾರೆ. ನಂತರ ಮೃತದೇಹವನ್ನು ನಂಜುಂಡಪ್ಪ ಲೇಔಟ್  ನಲ್ಲಿ ಎಸೆಯಲಾಗಿದೆ.

ರಕ್ತದ ಮಡುವಿನಲ್ಲಿ ಬಿದಿದ್ದ ಮೃತದೇಹವನ್ನು ಇಂದು ಬೆಳಗ್ಗೆ ನೋಡಿದ ದೇವಾಲಯದ ಆರ್ಚಕರೊಬ್ಬರು ಅತ್ತಿಬೆಲೆ ಪೊಲೀಸರಿಗೆ ದೂರು ನೀಡಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ  ಕೊಲೆ ನಡೆದಿರಬಹುದೆಂಬ ಶಂಕೆ ಇದೆ ಎಂದು ಪೊಲೀಸರು ಹೇಳಿದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಬಗ್ಗೆ ತಮಿಳುನಾಡು ಪೊಲೀಸರಿಗೆ ತಿಳಿಸಲಾಗಿದೆ. ಕೊಲೆ ನಡೆದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾಗಳು ಕಂಡುಬಂದಿಲ್ಲ, ವಿಚಾರಣೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ