ಸುಜಾತಾ ಕೆರಳ್ಳಿ 
ರಾಜ್ಯ

ಧಾರವಾಡ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ, ರಾಷ್ಟ್ರಮಟ್ಟದ ಹಾಕಿ ಆಟಗಾರ್ತಿ ಸಾವು

ತಂದೆಯೊಡನೆ ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ರಾಷ್ಟ್ರಮಟ್ಟದ ಮಹಿಳಾ ಹಾಕಿಪಟುವೊಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ: ತಂದೆಯೊಡನೆ ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ರಾಷ್ಟ್ರಮಟ್ಟದ ಮಹಿಳಾ ಹಾಕಿಪಟುವೊಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ತಾಲೂಕು  ಮಾದನಭಾವಿಯಲ್ಲಿ ನಡೆದ ಘಟನೆಯಲ್ಲಿ ಸುಜಾತಾ ಕೆರಳ್ಳಿ (16)  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಈಕೆ 17 ವರ್ಷದೊಳಗಿನ ವರ್ಗದಲ್ಲಿ ರಾಷ್ಟ್ರಮಟ್ಟದ ಹಾಕಿಪಟುವಾಗಿ ಗುರುತಿಸಿಕೊಂಡಿದ್ದರು.
ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಜಾತಾ ರಜೆಯಿದ್ದ ಕಾರಣ ಸ್ವಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ತಂದೆ ಮಲ್ಲಿಕಾರ್ಜುನ  ಅವರೊಡನೆ ಹೊರಹೋಗಿದ್ದ ಆಕೆ ರಸ್ತೆ ದಾಟುವಾಗಲೇ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಸುಜಾತಾ ಸ್ಥಳದಲ್ಲೇ ಸಾವನ್ನಪ್ಪಿದರೆ ಮಲ್ಲಿಕಾರ್ಜುನ ಅವರುಗೆ ಅಗ್ಂಭೀರ ಗಾಯವಾಗಿದೆ. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಿಅಲಾಗುತ್ತಿದೆ.
ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಪರಾರಿಯಾಗಿದ್ದಾನೆ, ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ವರದಿ ಪ್ರಕಾರ ಆಟಗಾರ್ತಿಯ ತಂದೆ ಮಲ್ಲಿಕಾರ್ಜುನಯ್ಯ ಸಹ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP