ರಾಜ್ಯ

ವ್ಯಕ್ತಿಯ ವೇಷ ನೋಡಿ ಯಾವ ನಿಲುವಿಗೂ ಬರಬಾರದು: ಪೊಲೀಸ್ ಆಯುಕ್ತ ಟಿ ಸುನಿಲ್ ಕುಮಾರ್

Raghavendra Adiga
ಬೆಂಗಳೂರು: ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ಕಂಡು ಬಂದ ಅನುಮಾನಾಸ್ಪದ ವ್ಯಕ್ತಿಯನ್ನು ಪತ್ತೆ ಮಾಡಲು ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ ಸುನಿಲ್ ಕುಮಾರ್ ಹೇಳಿದ್ದಾರೆ.
ಅನುಮಾನಾಸ್ಪದ ವ್ಯಕ್ತಿಯ ಬಗ್ಗೆ ಹಲವು ಊಹಾಪೋಹಗಳು ಹಬ್ಬಿವೆ. ಆದರೆ ಆತ ಈವರೆಗೆ ಪತ್ತೆಯಾಗಿಲ್ಲ. ವಿಶೇಷ ತನಿಖಾ ತಂಡ ಶೀಘ್ರದಲ್ಲೇ ಆತನನ್ನು ಪತ್ತೆ ಮಾಡಲಿದೆ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆಟ್ರೋದಲ್ಲಿ ಭದ್ರತಾ ವ್ಯವಸ್ಥೆ ಅತ್ಯಂತ ಸುಸ್ಥಿತಿಯಲ್ಲಿದೆ. ಖಾಸಗಿ ಸಿಬ್ಬಂದಿ ಜತೆಗೆ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ನಗರ ಪೊಲೀಸರು ಸಹ ಮೆಟ್ರೋ ಭದ್ರತೆಗೆ ವಿಶೇಷ ಗಮನಹರಿಸುತ್ತಿದ್ದಾರೆ ಎಂದರು.
ಈ ಎಲ್ಲಾ ಸಿಬ್ಬಂದಿ ಮೂರು ಪಾಳಿಯಲ್ಲಿ ಭದ್ರತಾ ಕಾರ್ಯದಲ್ಲಿ ನಿರತರಾಗಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ. ವ್ಯಕ್ತಿಯ ವೇಷ ಭೂಷಣಗಳನ್ನು ನೋಡಿ ಇವರು ಅಪಾಯಕಾರಿ ಎಂಬ ನಿಲುವಿಗೆ ಬರುವುದು ಸರಿಯಲ್ಲ. ಅನುಮಾನಾಸ್ಪದ ವ್ಯಕ್ತಿಯ ಬಳಿ ಶಸ್ತ್ರಾಸ್ತ್ರಗಳು ಇತ್ತು ಎನ್ನುವ ಸುದ್ದಿಯೂ ಸಹ ಸರಿಯಲ್ಲ. ಜನತೆ ವದಂತಿಗಳಿಗೆ ಕಿವಿಗೊಡಬಾರದು ಎಂದು ಸುನಿಲ್ ಕುಮಾರ್ ಮನವಿ ಮಾಡಿದರು.
SCROLL FOR NEXT