ಕುಕ್ಕೆ ಸುಬ್ರಮಣ್ಯ ದೇವಾಲಯ 
ರಾಜ್ಯ

ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ 80 ಕೋಟಿ ರು ಮೌಲ್ಯದ ಚಿನ್ನದ ರಥ: ಸಂಪುಟ ಸಭೆ ಅನುಮೋದನೆ

ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಚಿನ್ನದ ರಥ ಅರ್ಪಣೆಗೆ ಸಂಬಂಧಪಟ್ಟಂತೆ 80 ಕೋಟಿ ರೂ.ಪರಿಷ್ಕೃತ ಅಂದಾಜು ಪ್ರಸ್ತಾವಕ್ಕೆ ರಾಜ್ಯ ಸಚಿವ ..

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಚಿನ್ನದ ರಥ ಅರ್ಪಣೆಗೆ ಸಂಬಂಧಪಟ್ಟಂತೆ 80 ಕೋಟಿ ರೂ.ಪರಿಷ್ಕೃತ ಅಂದಾಜು ಪ್ರಸ್ತಾವಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನವಾಗಿ ಚಿನ್ನದ ರಥ ನಿರ್ಮಿಸಿ, ಅರ್ಪಿಸುವ ಪ್ರಸ್ತಾವಕ್ಕೆ 2005ರಲ್ಲಿ ರಾಜ್ಯ ಸರ್ಕಾರ ಅನುಮೋದನೆ ನೀಡಿತ್ತು. ಅಂದಿನ ಸಂದರ್ಭಕ್ಕೆ 15 ಕೋಟಿ ರೂ.ವೆಚ್ಚದಲ್ಲಿ ಚಿನ್ನದ ರಥ ನಿರ್ಮಿಸಲು ಉದ್ದೇಶಿಸಲಾಗಿತ್ತು.
ಇತ್ತೀಚೆಗೆ ಕ್ಷೇತ್ರದ ಭಕ್ತರು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ನೆನೆಗುದಿಗೆ ಬಿದ್ದಿರುವ ಯೋಜನೆಯನ್ನು ಪುನರ್‌ ಆರಂಭಿಸುವಂತೆ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾರುಕಟ್ಟೆ ದರದಲ್ಲಿ ಚಿನ್ನದ ಬೆಲೆ, ನಿರ್ಮಾಣ ವೆಚ್ಚ ಎಲ್ಲ ಅಂದಾಜುಗಳನ್ನು ಪರಿಷ್ಕರಿಸಿ ಸಂಪುಟ ಸಭೆಗೆ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಿದ್ದರು. ಅದರಂತೆ 80 ಕೋಟಿ ರೂ. ಪರಿಷ್ಕೃತ ಅಂದಾಜು ಪ್ರಸ್ತಾವಕ್ಕೆ ಸಭೆ ಆಡಳಿತಾತ್ಮಕ ಒಪ್ಪಿಗೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

20 ವರ್ಷಗಳಿಂದ ಆತನನ್ನು ಕೊಲ್ಲಲು ಬಯಸಿದ್ದೆ: ಫಾರೂಕ್ ಅಬ್ದುಲ್ಲಾ ಮೇಲೆ ದಾಳಿ ನಡೆಸಿದ ಶೂಟರ್ ಹೇಳಿಕೆ!

ಮೊಟ್ಟೆ ಪ್ರಿಯರಿಗೆ ಗುಡ್‌ ನ್ಯೂಸ್‌; ಬೆಲೆಯಲ್ಲಿ ಭಾರೀ ಇಳಿಕೆ, ಗ್ರಾಹಕರು ಸಂತಸ

ಜಮ್ಮು: ಫಾರೂಕ್‌ ಅಬ್ದುಲ್ಲಾ ಹತ್ಯೆಗೆ ಯತ್ನ, ಮದುವೆ ಮನೆಯಲ್ಲೇ ಗುಂಡಿನ ದಾಳಿ; ಡಿಸಿಎಂಗೆ ಗಾಯ

CM ಕುರ್ಚಿ ಕಸರತ್ತು: ಬಜೆಟ್ ಅಧಿವೇಶನ ಪೂರ್ಣಗೊಂಡ ಬಳಿಕ ನಾಯಕತ್ವ ಗೊಂದಲಕ್ಕೆ ‘ಹೈ’ ಪರಿಹಾರ..?

ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ: ಕೇರಳದಲ್ಲಿ ಪೊಲೀಸರ ಭದ್ರತೆಯೊಂದಿಗೆ ವಿವಾಹ!

SCROLL FOR NEXT