ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕೊಲೆಯಾದ 3 ದಿನಗಳ ಬಳಿಕ ಮಹಿಳೆ ಶವ ಪತ್ತೆ!

ಸಿಲಿಕಾನ್ ಸಿಟಿಯಲ್ಲಿ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ಮೂರು ದಿನಗಳ ಬಳಿಕ ಮಹಿಳೆಯ ಶವ ಪತ್ತೆಯಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ಮೂರು ದಿನಗಳ ಬಳಿಕ ಮಹಿಳೆಯ ಶವ ಪತ್ತೆಯಾಗಿದೆ.
ನಗರದ ದೊಡ್ಡಕಲಸಂದ್ರದಲ್ಲಿನ ಮನೆಯೊಂದರಲ್ಲಿ ಸುಮಾರು 43 ವರ್ಷ ವಯಸ್ಸಿನ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸ್ ಮೂಲಗಳು ತಿಳಿಸಿರುವಂತೆ ಮೂರು ನಾಲ್ಕು ದಿನಗಳ ಮೊದಲೇ ಮಹಿಳೆಯ ಕೊಲೆಯಾಗಿದ್ದು, ಮೃತ ಮಹಿಳೆಯನ್ನು ಭಾಗ್ಯಮ್ಮ ಎಂದು ಗುರುತಿಸಲಾಗಿದೆ.
ಭಾಗ್ಯಮ್ಮ ಅವರ ಸಹೋದರ ನಾರಾಯಣ್ ಮನೆಗೆ ಬಂದು ನೋಡಿದಾಗಿ ಕೊಲೆ ವಿಚಾರ ಬೆಳಕಿಗೆ ಬಂದಿದೆ. ಕಳೆದ ಮೂರು ದಿನಗಳಿಂದ ಭಾಗ್ಯಮ್ಮ ಹೂ ಮಾರಲು ಆಗಮಿಸಿರಲಿಲ್ಲ. ಹೀಗಾಗಿ ಅನುಮಾನಗೊಂಡ ನಾರಾಯಣ್ ಭಾಗ್ಯಮ್ಮ ಅವರ ಮೊಬೈಲ್ ಗೆ ಕರೆ ಮಾಡಿದ್ದಾರೆ. ಆದರೆ ಮೊಬೈಲ್ ಸ್ಪಿಚ್ ಆಫ್ ಆಗಿತ್ತು. ಇದರಿಂದ ಅನುಮಾನಗೊಂಡ ನಾರಾಯಣ ಮನೆಗೆ ಬಂದಿದ್ದಾರೆ. ಈ ವೇಳೆ ಪ್ರಕರಣ ಬಯಲಾಗಿದೆ.
ಭಾಗ್ಯಮ್ಮ ದೊಡ್ಡಕಲಸಂದ್ರದ 7ನೇ ಕ್ರಾಸ್ ನಿವಾಸಿಯಾಗಿದ್ದು, ಇವರು ಮೂಲತ- ಮಳವಳ್ಳಿ ತಾಲ್ಲೂಕಿನವರು ಎಂದು ತಿಳಿದುಬಂದಿದೆ. ವೃತ್ತಿಯಲ್ಲಿ ಹೂ ಮಾರುತ್ತಿದ್ದ ಭಾಗ್ಯಮ್ಮ ಕುಮಾರಸ್ವಾಮಿ ಲೇಔಟ್ ಬಸ್ ನಿಲ್ದಾಣದ ಬಳಿ ಹೂ ಮಾರುತ್ತಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಪೊಲೀಸರು ಘಟನಾ ಸ್ಥಳವನ್ನು ಪರಿಶೀಲನೆ ಮಾಡಿದ್ದು, ಭಾಗ್ಯಮ್ಮ ಅವರ ತಲೆಗೆ  ಕಬ್ಬಿಣದ ಸಲಾಕೆಯಿಂದ ಬಲವಾಗಿ ಹೊಡೆದಿದ್ದು, ಬಳಿಕ ಹರಿತವಾದ ಚಾಕುವಿನಿಂದ ಇರಿದಿದ್ದಾರೆ. ಪ್ರಸ್ತುತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!