ಸಂಗ್ರಹ ಚಿತ್ರ 
ರಾಜ್ಯ

ಅಪಘಾತ: ಮಂಡ್ಯದಲ್ಲಿ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಒಂದೇ ಕುಟುಂಬದ ಮೂವರ ದುರ್ಮರಣ!

ಕರಾಳ ಭಾನುವಾರ ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಜ್ಯದಲ್ಲಿ ನಡೆದಿದೆ. ಇನ್ನು ಮಂಡ್ಯದಲ್ಲಿ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ...

ಮಂಡ್ಯ: ಕರಾಳ ಭಾನುವಾರ ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಜ್ಯದಲ್ಲಿ ನಡೆದಿದೆ. ಇನ್ನು ಮಂಡ್ಯದಲ್ಲಿ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ದೇವಸ್ಥಾನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. 
ಕೆಆರ್ ಪೇಟೆ ತಾಲೂಕಿನ ಸಾಧುಗೋನಹಳ್ಳಿಯ ಹೇಮಗಿರಿ ಬೀರುವಳ್ಳಿ ರಸ್ತೆಯಲ್ಲಿ ದುರ್ಘಟನೆ ನಡೆದಿದ್ದು ಕೆಆರ್ ಪೇಟೆಯ ನಿವಾಸಿ ಕೃಷ್ಣ ಎಂಬುವರ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಕೃಷ್ಣ, ಜಯಮ್ಮ ಹಾಗೂ ಗೌರಿ ಎಂದು ಗುರುತಿಸಲಾಗಿದೆ. ದೇವಸ್ಥಾನಕ್ಕೆಂದು ಬೈಕ್ ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಬೈಕ್ ನಲ್ಲಿದ್ದ ಮೂವರ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೆಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್