ರಾಜ್ಯ

ಧಾರವಾಡದಲ್ಲಿ ಮನೆ ಕುಸಿತ: ಇಬ್ಬರು ಮಕ್ಕಳು ಸೇರಿದಂತೆ ಮೂವರ ದುರ್ಮರಣ

Shilpa D
ಧಾರವಾಡ: ಧಾರವಾಡ ಜಿಲ್ಲೆಯ ಯರಗುಪ್ಪಿ ಗ್ರಾಮದಲ್ಲಿ  ಮನೆಯೊಂದು ಕುಸಿದ ಪರಿಣಾಮ ಇಬ್ಬರು ಮಕ್ಕಳು ಹಾಗೂ ಮಹಿಳೆ ಸೇರಿದಂತೆ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಯಲ್ಲವ್ವ ಗಡಾದ್ (53) ಮೊಮ್ಮಕ್ಕಳಾದ ಜ್ಯೋತಿ ಮೇಟಿ(9) ಮತ್ತು ಶ್ರಾವಣಿ ರಾದಾಯಿ (4) ಮೃತ ದುರ್ದೈವಿಗಳು.
ಕುಂದಗೋಳ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
SCROLL FOR NEXT