ಸಂಗ್ರಹ ಚಿತ್ರ 
ರಾಜ್ಯ

ನಿಖಿಲ್ ಆಯ್ತು, ಈಗ ಅನಿತಕ್ಕ ಎಲ್ಲಿದ್ದಾರೆ? ಟ್ರೋಲ್

ಸಾಮಾಜಿಕ ಜಾಲತಾಣಗಳಲ್ಲಿ ಇಷ್ಟು ದಿನ ನಿಖಿಲ್ ಎಲ್ಲಿದ್ದೀಯಪ್ಪಾ? ಎಂಬುದು ಸಖತ್ ಟ್ರೋಲ್ ಆಗಿತ್ತು. ಆದರೆ, ಈಗ ನಿಖಿಲ್ ಅವರ ತಾಯಿ ಅನಿತಾ ಕುಮಾರಸ್ವಾಮಿ ಎಲ್ಲಿದ್ದಾರೆ ಎಂಬುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಾಮನಗರ:  ಸಾಮಾಜಿಕ ಜಾಲತಾಣಗಳಲ್ಲಿ ಇಷ್ಟು ದಿನ ನಿಖಿಲ್ ಎಲ್ಲಿದ್ದೀಯಪ್ಪಾ? ಎಂಬುದು ಸಖತ್  ಟ್ರೋಲ್ ಆಗಿತ್ತು. ಆದರೆ, ಈಗ ನಿಖಿಲ್  ಅವರ ತಾಯಿ ಅನಿತಾ ಕುಮಾರಸ್ವಾಮಿ ಎಲ್ಲಿದ್ದಾರೆ ಎಂಬುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರೇಷ್ಮೆ ನಗರಿ ಖ್ಯಾತಿಯ ರಾಮನಗರದಲ್ಲಿ ಸದ್ಯ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಜನರ ಸಮಸ್ಯೆಗಳಿಗೆ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಂದಿಸುತ್ತಿಲ್ಲ, ಕ್ಷೇತ್ರಕ್ಕೂ ಭೇಟಿ ನೀಡುತ್ತಿಲ್ಲ ಎಂಬುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಇದಕ್ಕೆ ಬಳಸಿಕೊಂಡು  ಬಿಜೆಪಿ ಕಾರ್ಯಕರ್ತರಾದ  ರುದ್ರ ದೇವರು ಹಾಗೂ ವಿನೋದ್ ಭಗತ್ ಎಂಬುವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.

ಮೂರು ದಿನಕ್ಕೂ ನಾಲ್ಕು ದಿನಕ್ಕೊ  ಮೋರಿ ನೀರು ಬಿಡುತ್ತಿದ್ರು, ಈಗ ಅದನ್ನು ಬಿಡುತ್ತಿಲ್ಲ, ನಲ್ಲಿಯಲ್ಲಿ 15 ದಿನಗಳಾದರೂ ನೀರು ಬರುತ್ತಿಲ್ಲ, ಶಾಸಕರಾದ ಅನಿತಕ್ಕೆ ಯಾವಾಗ ಸಮಸ್ಯೆ ಬಗೆಹರಿಸುತ್ತಾರೋ ಗೊತ್ತಿಲ್ಲ, ಅನಿತಾಕ್ಕೆ ಎಲ್ಲಿದ್ದೀರಿ ಎಂದು ವಿಡಿಯೋದಲ್ಲಿ ಕೇಳಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ನಿಖಿಲ್ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಅನಿತಾ ಕುಮಾರಸ್ವಾಮಿ ನಂತರದಲ್ಲಿ  ರಾಮನಗರಕ್ಕೆ ಭೇಟಿ ನೀಡಿಲ್ಲ, ಇದು ಜನರ ಆಕ್ರೋಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 2025: UAE ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಜಯ

ನೇಪಾಳ ಬಿಕ್ಕಟ್ಟು: ಭಾರತದಲ್ಲಿ ಕಟ್ಟೆಚ್ಚರ; ಸಹಾಯವಾಣಿ ಆರಂಭ; ಕಠ್ಮಂಡುವಿಗೆ ವಿಮಾನ, ಬಸ್ ಸೇವೆ ರದ್ದು!

ಮಂಗಳೂರು: ನಕಲಿ ಆಧಾರ್ ಕಾರ್ಡ್‌ ತಯಾರಿಸಿ ಸರ್ಕಾರಿ ಇಲಾಖೆಗಳು, ನ್ಯಾಯಾಲಯಗಳಿಗೆ ವಂಚನೆ; ವ್ಯಕ್ತಿಯ ಬಂಧನ

2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲು

ಗುಜರಾತ್ ಫ್ಲೋರೋ ಕೆಮಿಕಲ್ ಕಂಪನಿಯಲ್ಲಿ ವಿಷಕಾರಿ ಅನಿಲ ಸೋರಿಕೆ: ಓರ್ವ ಸಾವು, 12 ಮಂದಿ ಆಸ್ಪತ್ರೆಗೆ ದಾಖಲು

SCROLL FOR NEXT