ರೇಷ್ಮಾ ಪಡೇಕನೂರ 
ರಾಜ್ಯ

ವಿಜಯಪುರ: ಕಾಂಗ್ರೆಸ್ ನಾಯಕಿ ನಿಗೂಢ ಸಾವು, ಸೇತುವೆ ಕೆಳಗೆ ಶವ ಪತ್ತೆ

ವಿಜಯಪುರದ ಕಾಂಗ್ರೆಸ್ ನಾಯಕಿ, ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕೊಲ್ಹಾರದ ಕೃಷ್ಣಾ ನದಿ ಸೇತುವೆಯ ಕೆಳಗೆ ಶುಕ್ರವಾರ ಬೆಳಿಗ್ಗೆ ಶವ ಪತ್ತೆಯಾಗಿದೆ.

ವಿಜಯಪುರ: ವಿಜಯಪುರದ ಕಾಂಗ್ರೆಸ್ ನಾಯಕಿ, ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕೊಲ್ಹಾರದ ಕೃಷ್ಣಾ ನದಿ ಸೇತುವೆಯ ಕೆಳಗೆ ಶುಕ್ರವಾರ ಬೆಳಿಗ್ಗೆ ಶವ ಪತ್ತೆಯಾಗಿದೆ.
ಗುರುವಾರ ರಾತ್ರಿ ರೇಷ್ಮಾ ಅವರನ್ನು ಹತ್ಯೆಗೈದು ದುಷ್ಕರ್ಮಿಗಳು ಶವವನ್ನು ಸೇತುವೆಯ ಕೆಳಗೆ ಎಸೆದಿರಬಹುದು ಎಂದು ಪೋಲೀಸರು ಶಂಕಿಸಿದ್ದಾರೆ.
ರೇಷ್ಮಾ ಗುರುವಾರ ರಾತ್ರಿ ಮಹಾರಾಷ್ಟ್ರದ ಕೊಲ್ಹಾಪುರ ಎಂಐಎಂ ಮುಖಂಡರೊಬ್ಬರೊಂದಿಗೆ ಕಾರಿನಲ್ಲಿ ತೆರಳಿದ್ದರೆನ್ನಲಾಗಿದೆ.ಈಕೆ ಎಂಐಎಂ ಮುಖಂಡರೊಡನೆ ಒಅಡನಾಟ ಹೊಂದಿದ್ದು ಈ ಹೆಂದೊಮ್ಮೆ ಮುಖಂಡನ ಪತ್ನಿ ರೇಷ್ಮಾ ಮನೆ ಮುಂದೆ ಬಂದು ರಂಪಾಟವನ್ನೂ ನಡೆಸಿದ್ದರು. ಎಂದು ಮೂಲಗಳು ಹೇಳಿವೆ.
ಜೆಡಿಎಸ್ ಜಿಲ್ಲಾಧ್ಯಕ್ಷೆ ಆಗಿದ್ದ ರೇಷ್ಮಾ ಪಡೇಕನೂರ, 2013ರಲ್ಲಿ ದೇವರ ಹಿಪ್ಪರಗಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರೇಷ್ಮಾ ಅವರಿಗೆ ಪಕ್ಷ ಟಿಕೆಟ್ ಕೊಟ್ಟಿರಲಿಲ್ಲ. ಇದರಿಂದ ಬೇಸರಗೊಂಡಿದ್ದ ಆಕೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಘಟನೆ ಕುರಿತಂತೆ ಕೊಲ್ಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT