ಸಂಭಾಜಿ ಪಾಟೀಲ್ 
ರಾಜ್ಯ

ಬೆಳಗಾವಿ : ಮಾಜಿ ಶಾಸಕ, ಎಂಇಎಸ್ ಮುಖಂಡ ಸಂಭಾಜಿ ಪಾಟೀಲ್ ನಿಧನ

ಮಾಜಿ ಶಾಸಕ, ಎಂಇಎಸ್ ಮುಖಂಡ ಸಂಭಾಜಿ ಪಾಟೀಲ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಂಭಾಜಿ ಪಾಟೀಲ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ , ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಬೆಳಗಾವಿ: ಮಾಜಿ ಶಾಸಕ, ಎಂಇಎಸ್ ಮುಖಂಡ ಸಂಭಾಜಿ ಪಾಟೀಲ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಂಭಾಜಿ ಪಾಟೀಲ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ , ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಮೂರು ಬಾರಿ ಬೆಳಗಾವಿ ಮೇಯರ್ ಆಗಿದ್ದ ಅವರು, ಒಂದು ಬಾರಿ ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

2013ರ ಚುನಾವಣೆಯಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಎಂಇಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದ್ದರು. ಆದರೆ, 2018ರ ಚುನಾವಣೆಯಲ್ಲಿ ಬೆಳಗಾವಿ ಉತ್ತರದಿಂದ ಕಣಕ್ಕಿಳಿದು ಕೇವಲ 249 ಮತಗಳನ್ನು ಪಡೆದಿದ್ದರು.
ಬೆಳಗಾವಿಯಲ್ಲಿ ಕರ್ನಾಟಕ ವಿಧಾನಸಭೆ ಅಧಿವೇಶನ ನಡೆಯುವಾಗ ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ಮಹಾಮೇಳವ ಆಯೋಜಿಸಿ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ನಾಳೆ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ