ಸಕಲೇಶಪುರ: ಎದೆಹಾಲು ನೆತ್ತಿಗೆ ಏರಿ ಒಂದೂವರೆ ವರ್ಷದ ಮಗು ಸಾವು!
ಎದೆ ಹಾಲು ಕುಡಿಯುವಾಗ ಹಾಲು ನೆತ್ತಿಗೇರಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ....
ಹಾಸನ: ಎದೆ ಹಾಲು ಕುಡಿಯುವಾಗ ಹಾಲು ನೆತ್ತಿಗೇರಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.
ಎದೆ ಹಾಲು ಶ್ವಾಸನಾಳಕ್ಕೆ ಹೋಗಿ ಅಸ್ವಸ್ಥಗೊಂಡಿದ್ದ ಮಗು ಸಕಲೇಶಪುರದ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಸಕಲೇಶಪುರ ತಾಲೂಕಿನ ಅರೆಕೆರೆ ಗ್ರಾಮದ ರಂಜಿತ, ಲೋಕೇಶ್ ದಂಪತಿಯ ಗಂಡು ಮಗು ಇಂದು ಮುಂಜಾನೆ ತಾಯಿ ಎದೆ ಹಾಲು ನೆತ್ತಿಗೆ ಹತ್ತಿ ಉಸಿರಾಟ ಸಾಧ್ಯವಾಗದೆ ಅಸ್ವಸ್ಥಗೊಂಡಿತ್ತು.
ಗಾಬರಿಯಾದ ಪೋಷಕರು ಮಗುವನ್ನು ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.