ಮಂಗಳೂರು: ಪೋಲೀಸರ ಭರ್ಜರಿ ಕಾರ್ಯಾಚರಣೆ, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂ. ಜಪ್ತಿ
ಮಂಗಳೂರು ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸಮರ್ಪಕ ದಾಖಲೆಗಳಿಲ್ಲದ 1 ಕೋಟಿ ರೂ. ನ್ನು ಜಪ್ತಿ ಮಾಡಿದ್ದಾರೆ.
ಮಂಗಳುರು: ಮಂಗಳೂರು ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸಮರ್ಪಕ ದಾಖಲೆಗಳಿಲ್ಲದ 1 ಕೋಟಿ ರೂ. ನ್ನು ಜಪ್ತಿ ಮಾಡಿದ್ದಾರೆ.
ದಾಖಲೆ ಇಲ್ಲದೆ ಸಾಗಿಸುತಿದ್ದ ಹಣವನ್ನು ವಶಕ್ಕೆ ಪಡೆದಿರುವ ಪೋಲೀಸರು ಈ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ಬಂದರು ಠಾಣೆ ಪೋಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಬಂಧಿತನನ್ನು ಬೆಂಗಳೂರಿನ ಮಲ್ಲೇಶ್ವರಂ ಮೂಲದ ಮಂಜುನಾಥ (36) ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ 6.30ರ ಸುಮಾರಿಗೆ ಮಂಗಳೂರಿನ ರಥಬೀದಿಯಲ್ಲಿ ಬಂದರು ಠಾಣೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಮಂಜುನಾಥ್ ಅನುಮಾನಾಸ್ಪದವಾಗಿ ಬ್ಯಾಗೊಂದನ್ನು ಹೆಗಲ ಮೇಲೆ ಹಾಕಿಕೊಂಡು ತಿರುಗುತ್ತಿದ್ದ. ಈ ವೇಳೆ ವಿಚಾರಿಸಲಾಗಿ ಸಮರ್ಪಕ ಉತ್ತರ ದೊರಕದಿದ್ದಾಗ ಬ್ಯಾಗ್ ಪರಿಶೀಲಿಸಲಾಗಿದೆ. ಆಗ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಕೋಟಿ ರು. ಪತ್ತೆಯಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.