ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಭಾವಿ ಪತಿ ವಿರುದ್ಧ ಅತ್ಯಾಚಾರ-ವಂಚನೆ ಕೇಸ್ ದಾಖಲಿಸಿದ ಮಹಿಳೆ

ತನ್ನ ಬಾವಿ ಪತಿ ತನ್ನ ಮೇಲೆ ಅತ್ಯಾಚಾರ ನಡೆಸಿ ಮೂರುವರೆ ಲಕ್ಷ ರೂ ಹಣ ಪಡೆದು ವಂಚಿಸಿದ್ದಾನೆ ಎಂದು ಮಹಿಳೆಯೊಬ್ಬರು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ...

ಬೆಂಗಳೂರು: ತನ್ನ ಬಾವಿ ಪತಿ ತನ್ನ ಮೇಲೆ ಅತ್ಯಾಚಾರ ನಡೆಸಿ ಮೂರುವರೆ ಲಕ್ಷ ರೂ ಹಣ ಪಡೆದು ವಂಚಿಸಿದ್ದಾನೆ ಎಂದು ಮಹಿಳೆಯೊಬ್ಬರು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಎಜಿಎಸ್ ಲೇಔಟ್ ನಿವಾಸಿ ಆಶಾ
(ಹೆಸರು ಬದಲಿಸಲಾಗಿದೆ) ಎಂಬ ಮಹಿಳೆ , ರೂಪೇನ ಅಗ್ರಹಾರ ನಿವಾಸಿ ಶಶಿ ಎಂಬಾತನ ವಿರುದ್ಧ ಶನಿವಾರ ದೂರು ದಾಖಲಿಸಿದ್ದಾರೆ.
2015 ರಲ್ಲಿ ಫೇಸ್ ಬುಕ್ ಮೂಲಕ ಪರಿಚಯವಾದ ಇಬ್ಬರು ನಂತರ ನಿರಂತರವಾಗಿ ಚಾಟಿಂಗ್ ಮಾಡುತ್ತಿದ್ದರು, ಜೊತೆಗೆ ಸಂಬಂಧ ಇಟ್ಟುಕೊಂಡಿದ್ದರು.
ಅಕ್ಟೋಬರ್ 15 2015 ರಲ್ಲಿ ಶಶಿ ಆಶಾಳನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದ, ನಂತರ ಮದುವೆಯಾಗುವುದಾಗಿ ತನ್ನನ್ನು ಸಮಾಧಾನ ಪಡಿಸಿದ್ದ, ನಂತರ ಇಬ್ಬರು ತಮ್ಮ ತಮ್ಮ ಕುಟುಂಬಸ್ಥರನ್ನು ಭೇಟಿ ಮಾಡಿ ಮದುವೆ ನಿರ್ಧರಿಸಲಾಯಿತು. 2018ರ ಆಗಸ್ಟ್ 12 ರಂದು ಇಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಆ ಸಮಯದಲ್ಲಿ ವರದಕ್ಷಿಣೆ ರೂಪದಲ್ಲಿ ಶಶಿ ಮೂರವರೆ ಲಕ್ಷ ರು ಹಣ ತೆಗೆದುಕೊಂಡಿದ್ದ, ಅದಾದ ಆರು ತಿಂಗಳ ನಂತರ ಆಕೆಯನ್ನು ಮದುವೆಯಾಗುವುದಿಲ್ಲ ಎಂದು ಹೇಳಿದ್ದ. ಈ ಸಂಬಂಧ ಪೊಲೀಸರು ಶಶಿ ಪೋಷಕರನ್ನು ವಿಚಾರಿಸಿದ್ದಾರೆ. ಒಂದು ತಿಂಗಳಿಂದ ತಮ್ಮ ಮಗ0 ನಾಪತ್ತೆಯಾಗಿದ್ದು, ನಾಪತ್ತೆ ಪ್ರಕರಣ ದಾಖಲಿಸಿರುವುದಾಗಿ ಹೇಳಿದ್ದಾರೆ, ವಂಚನೆ ಪ್ರಕರಣದಡಿ ಕೇಸ್ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!