ಕಿರಣ್ ಮಜುಂದಾರ್ ಶಾ 
ರಾಜ್ಯ

ಎನ್ ಡಿಎ 2.0 ತನ್ನ ಮೊದಲ ಐದು ವರ್ಷಗಳ ಆರ್ಥಿಕ ಕಾರ್ಯತಂತ್ರ ಯೋಜನೆ ಜಾರಿಗೆ ತರಲಿ: ಕಿರಣ್ ಮಜುಂದಾರ್ ಶಾ

ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ...

ಬೆಂಗಳೂರು:'ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ.
ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಹೇಳಿದ್ದಾರೆ. ದೇಶದಲ್ಲಿ ಬಂಡವಾಳ ಹೂಡಿಕೆದಾರರ ಮನ ಗೆದ್ದು ಆರ್ಥಿಕ ಪ್ರಗತಿ ಸಾಧಿಸಲು ಮುಖ್ಯ ಕಾರಣವಾಗುವುದು ಉದ್ಯಮ ನಡೆಸಲು ಬೇಕಾದ ಪೂರಕ ಸುಲಭ ವಾತಾವರಣ. ಸ್ವಯಂ ದೃಢೀಕರಣ, ವಾರ್ಷಿಕ ಲೈಸೆನ್ಸ್ ನವೀಕರಣದ ಬದಲಿಗೆ 5 ವರ್ಷಗಳ ಲೈಸೆನ್ಸ್ ನವೀಕರಣ ಪರಿಕಲ್ಪನೆ ಉದ್ಯಮಕ್ಕೆ ಸಹಾಯವಾಗಲಿದೆ. ಉದ್ಯಮ ಸರಾಗವಾಗಿ ಮತ್ತು ವೇಗವಾಗಿ ಸಾಗಲು ನೀತಿ ನಿರೂಪಣೆ ಸರಿಯಾಗಿರಬೇಕು ಎಂದು ಕಿರಣ್ ಮಜುಂದಾರ್ ಶಾ ಹೇಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT