ರಾಜ್ಯ

ಕೊಪ್ಪಳದ ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿಗೆ ಅನುಮೋದನೆ

Lingaraj Badiger
ಕೊಪ್ಪಳ: ಕೊಪ್ಪಳ ಜಿಲ್ಲೆಯ ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆರಂಭಕ್ಕೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅನುಮೋದನೆ ನೀಡಿದೆ. 
ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಕಾಲೇಜು ಪ್ರಾರಂಭಕ್ಕೆ ಅನುಮತಿ ದೊರೆತಿದೆ ಎಂದು  ಕಾಲೇಜಿನ ಪ್ರಾಂಶುಪಾಲರಾದ ಡಾ. ವಿರುಪಾಕ್ಷಿ ಬಾಗೋಡಿ ತಿಳಿಸಿದ್ದಾರೆ. 
ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್, ಮೆಕ್ಯಾನಿಕಲ್, ಎಲಿಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗಗಳಲ್ಲಿ ತಲಾ 60ವಿದ್ಯಾರ್ಥಿಗಳ ಪ್ರವೇಶಕ್ಕೆ ತಾಂತ್ರಿಕ ಪರಿಷತ್ ಅನುಮತಿ ನೀಡಿದೆ. 
ಈ ಕಾಲೇಜು ಬೆಳಗಾವಿಯಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಡಿ ನೋಂದಣಿ ಮಾಡಿಕೊಂಡಿದೆ.
SCROLL FOR NEXT