ರಾಜ್ಯ

ರಾಜ್ಯದ 973 ಸರ್ಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಶಿಕ್ಷಣ ಪ್ರಾರಂಭ

Sumana Upadhyaya
ಬೆಂಗಳೂರು: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸುವ ಯೋಜನೆ ಕೊನೆಗೂ ಕಾರ್ಯರೂಪದ ಹಂತಕ್ಕೆ ಬಂದಿದೆ.
ಸರ್ಕಾರ ಸಾವಿರ ಆಂಗ್ಲ ಮಾಧ್ಯಮ ಶಾಲೆಗಳಿಗೆ ನೀಡಿರುವ ಅನುಮೋದನೆಯಲ್ಲಿ ಬೆಂಗಳೂರಿಗೆ ಸಿಂಹಪಾಲು ದೊರಕಿದೆ. ಬೆಂಗಳೂರು ದಕ್ಷಿಣ ಭಾಗದಲ್ಲಿ 67 ಶಾಲೆಗಳು, ಬೆಂಗಳೂರು ಉತ್ತರದಲ್ಲಿ 54 ಆಂಗ್ಲ ಮಾಧ್ಯಮ ಶಾಲೆಗಳು ಆರಂಭವಾಗಲಿವೆ.
ಸರ್ಕಾರಿ ಶಾಲೆಗಳನ್ನು ಜನಪ್ರಿಯಗೊಳಿಸಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಹೆಚ್ಚೆಚ್ಚು ಮಕ್ಕಳು ಸೇರುವಂತೆ ಮಾಡಲು ಈ ಶೈಕ್ಷಣಿಕ ವರ್ಷದಿಂದಲೇ ಆಯ್ದ ಜಿಲ್ಲೆಗಳಲ್ಲಿ ಪ್ರಾರಂಭವಾಗಲಿದೆ. ಸದ್ಯಕ್ಕೆ 973 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಆರಂಭಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಉಳಿದ 27 ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಬೇಡಿಕೆ ಬಂದರೆ ನೋಡಿಕೊಂಡು ಸರ್ಕಾರ ಪ್ರಾರಂಭಿಸಲಿದೆ.
ವಿದ್ಯಾರ್ಥಿಗಳಿಗೆ ಬೋಧನೆಗೆ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ದ್ವಿಭಾಷೆಯಲ್ಲಿ ಪುಸ್ತಕ ತಯಾರಿಸುತ್ತಿದೆ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯಿಂದ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದೆ. ಆಯಾ ಜಿಲ್ಲಾ ತರಬೇತಿ ಕೇಂದ್ರಗಳಲ್ಲಿ ತರಬೇತಿ ನೀಡಲಾಗುತ್ತಿದೆ.
SCROLL FOR NEXT