ರಾಜ್ಯ

ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರ ವಿರೋಧ, ಪ್ರತಿಭಟನೆ

Sumana Upadhyaya

ಕಲಬುರಗಿ: ಅಂಗನವಾಡಿ ಕೇಂದ್ರಗಳ ಬದಲಿಗೆ, ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ  ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸುವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಅಂಗನವಾಡಿ ಶಿಕ್ಷಕರ ಸಂಘದ ಸದಸ್ಯರು ಹಾಗೂ ಸಿಪಿಐ (ಎಂ) ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಂಘದ ರಾಜ್ಯಾಧ್ಯಕ್ಷೆ ಶಾಂತಾ ಘಂಟಿ, ರಾಜ್ಯ ಸರ್ಕಾರದ ನಿರ್ಧಾರದಿಂದ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ 70 ಸಾವಿರ ಅಂಗನವಾಡಿ ಕಾರ್ಯಕರ್ತೆಯರ ಹಿತಾಸಕ್ತಿಗೆ ಧಕ್ಕೆಯಾಗಿದೆ. ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಗಣಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಅಂಗನವಾಡಿಗಳಲ್ಲೇ ಎಲ್ ಕೆ ಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸಬೇಕು. ಇದರಿಂದ ಕಾರ್ಯಕರ್ತರ ಹಿತಾಸಕ್ತಿಯನ್ನು ಕಾಯ್ದುಕೊಂಡಂತಾಗುತ್ತದೆ ಎಂದು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಕಳೆದ 44 ವರ್ಷಗಳಿಂದ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ನೆರವಾಗುತ್ತಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ, ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಅವರು ಎಚ್ಚರಿಕೆ ನೀಡಿದರು.

SCROLL FOR NEXT