ಕೆ ಅಣ್ಣಾಮಲೈ 
ರಾಜ್ಯ

ಡಿಸಿಪಿ ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯ ಪ್ರವೇಶಕ್ಕೆ ಸಿಂಗಂ ಖ್ಯಾತಿಯ ಅಣ್ಣಾಮಲೈ ಸಿದ್ಧತೆ

ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿರುವ ಖಡಕ್ ಐಪಿಎಸ್ ಅಧಿಕಾರಿ ಡಿಸಿಪಿ ಕೆ ಅಣ್ಣಾಮಲೈ ಅವರು ಇದೀಗ ಖಾಕಿ ಕಳಚಿ ರಾಜಕೀಯ ಪ್ರವೇಶಿಸಲು...

ಬೆಂಗಳೂರು: ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿರುವ ಖಡಕ್ ಐಪಿಎಸ್ ಅಧಿಕಾರಿ ಡಿಸಿಪಿ ಕೆ ಅಣ್ಣಾಮಲೈ ಅವರು ಇದೀಗ ಖಾಕಿ ಕಳಚಿ ರಾಜಕೀಯ ಪ್ರವೇಶಿಸಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣಾಮಲೈ ಅವರು ಜೂನ್ ಮೊದಲ ವಾರದಲ್ಲಿ ರಾಜೀನಾಮೆ ನೀಡಿ ರಾಜಕೀಯಕ್ಕೆ ಧುಮುಕಲಿದ್ದಾರೆ ಎನ್ನಲಾಗಿದೆ.
ಅಣ್ಣಾಮಲೈ ಅವರು ಈ ಸಂಬಂಧ ನಾಳೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತಿದ್ದು, ರಾಜೀನಾಮೆ ಕುರಿತು ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.
ಸಾಮಾಜ ಸೇವೆಯಲ್ಲಿ ಮತ್ತಷ್ಟು ತೊಡಗಿಸಿಕೊಳ್ಳುವ ಉದ್ದೇಶದಿಂದ ರಾಜಕೀಯಕ್ಕೆ ಬರಲಿದ್ದಾರೆ ಎನ್ನಲಾಗಿದ್ದು, ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಜೀವನ ಆರಂಭಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
2011ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ ಅವರು ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್​ಪಿಯಾಗಿ ಕಾರ್ಯನಿರ್ವಹಿಸಿದ್ದು, ದಿಢೀರ್ ರಾಜೀನಾಮೆ ನಿರ್ಧಾರ ಸಾಕಷ್ಟು ಕುತೂಹಲ ಮೂಡಿಸಿದೆ. 
ಅಣ್ಣಾಮಲೈ ಅವರು ರಾಜೀನಾಮೆ ನೀಡಿದ ಬಳಿ ಡಿಎಂಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, 2021ರಲ್ಲಿ ಕೊಯಮತ್ತೂರು ಕ್ಷೇತ್ರದಿಂದ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಅಲ್ಲದೆ ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಅವರು ಸಹ ಇದಕ್ಕೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ವಿವಾದ: ಮಾತುಕತೆ ಅಂದ್ರೆ ರಾಜಿ ಎಂದರ್ಥವಲ್ಲ; ಬೆಂಗಳೂರು ಭೇಟಿ ಪ್ರಯತ್ನ ಸಮರ್ಥಿಸಿಕೊಂಡ ತಮಿಳುನಾಡು ಸಿಎಂ ವಿಜಯ್!

'ಅವರು Mojtaba Khamenei ಹೌದೋ, ಅಲ್ಲವೋ ಗೊತ್ತಾಗುತ್ತಿಲ್ಲ': ಇರಾನ್ ಅಧ್ಯಕ್ಷ ಶಾಕಿಂಗ್ ಹೇಳಿಕೆ; ಸುಪ್ರೀಂ ಲೀಡರ್ ಜೀವಂತವಾಗಿರುವ ಬಗ್ಗೆ ಅನುಮಾನ ಮತ್ತಷ್ಟು ಗಾಢ!

ಕೇರಳದಲ್ಲಿ 'ಕೇಸರಿ' ನಿಷೇಧವೇ?: ಬಟ್ಟೆ ಬಣ್ಣದ ಕುರಿತು ಪ್ರಶ್ನಿಸಿದ ಪತ್ರಕರ್ತನಿಗೆ ನಟಿ ಪ್ರಿಯಾ ವಾರಿಯರ್ 'ಶಾಂತ' ತಿರುಗೇಟು!

TCS ಮತಾಂತರ ಪ್ರಕರಣ: Nida Khanಗೆ ಆಶ್ರಯ ನೀಡಿದ್ದ AIMIM ಕಾರ್ಪೋರೇಟರ್ ಬಂಧನ

" ಭಯಪಡಬೇಕಾದ ಅಗತ್ಯವಿಲ್ಲ, ನಾನು ನಿಮ್ಮೊಂದಿಗೆ ಇದ್ದೇನೆ: TMC ಬಂಡಾಯ, ಶಿಂಧೆ ಬಣ ಸೇರಿದ ಶಿವಸೇನಾ ಸಂಸದರಿಗೆ ಪ್ರಧಾನಿ ಮೋದಿ ಅಭಯ!