ಧಾರವಾಡ ಪೇಡ(ಸಾಂದರ್ಭಿಕ ಚಿತ್ರ) 
ರಾಜ್ಯ

ಮಂಡ್ಯ: ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 5 ಕ್ವಿಂಟಾಲ್ ಧಾರವಾಡ ಪೇಡಾ!

ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ...

ಮಂಡ್ಯ: ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.
ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು.
ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ.
ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವು ಹಿನ್ನೆಲೆಯಲ್ಲಿ ಆಯೋಜನೆಗೊಂಡಿರುವ ಸ್ವಾಭಿಮಾನ ಸಮಾವೇಶ ಹಾಗೂ ಅಂಬರೀಶ್ ಜನ್ಮದಿನದ ಅಂಗವಾಗಿ ಐದು ಕ್ವಿಂಟಾಲ್ ಧಾರವಾಡ ಪೇಡಾವನ್ನು ಉದ್ಯಮಿ ನಾರಾಯಣ ಕಲಾಲ್ ರವಾನಿಸಿದ್ದಾರೆ. ಇದಕ್ಕಾಗಿ ಅವರು 2.10 ಲಕ್ಷ ರು ಹಣ ವ್ಯಯಿಸಿದ್ದಾರೆ.
ಬಾಬುಸಿಂಗ್ ಠಾಕೂರ್ ಪೇಡಾ ಫ್ಯಾಕ್ಟರಿಯಲ್ಲಿ ತಯಾರಾಗಿರುವ ಪೇಡಾವನ್ನು ವಿಶೇಷ ಬಾಕ್ಸ್ ಗಳಲ್ಲಿ ಪ್ಯಾಕ್ ಮಾಡಿದ್ದು, ಈಗಾಗಲೇ ಮಂಡ್ಯ ತಲುಪಿವೆ. 
ಈ ಹಿಂದೆ ಅಂಬರೀಶ್ ಅವರು ಯಶ್, ರಾಧಿಕಾ ದಂಪತಿಯ ಮಗುವಿಗೆ ಕಲಘಟಗಿ ತೊಟ್ಟಿಲು ನೀಡುವ ಸಂಬಂಧ ನಾರಾಯಣ ಕಲಾಲ್ ಅವರಿಗೆ ಫೋನ್ ಮಾಡಿದ್ದರು. ತನ್ನ ಬೇಡಿಕೆಗೆ ಅನುಗುಣವಾಗಿ ತೊಟ್ಟಿಲು ತಯಾರಿಸಿ ಕೊಡುವಂತೆ ಅಂಬಿ ಕಲಾಲ್ ಅವರಲ್ಲಿ ಕೇಳಿಕೊಂಡಿದ್ದರು. ಬಳಿಕ ನಾರಾಯಣ್ ಕಲಾಲ್ ಅವರು ಕಲಘಟಗಿಯ ಮೂಲದ ಶ್ರೀಧರ್ ಸಾವುಕಾರ್ ಅವರಲ್ಲಿ ತೊಟ್ಟಿಲಿಗೆ ಆರ್ಡರ್ ಮಾಡಿಸಿಕೊಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ