ರಾಜ್ಯ

'ದೇಶದಲ್ಲಿ 90 ಲಕ್ಷ ಉದ್ಯೋಗ ನಷ್ಟ ಆತಂಕಕಾರಿ'

Srinivas Rao BV

ಚಿಕ್ಕಬಳ್ಳಾಪುರ: ದೇಶದ ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ವಿಚಾರಗಳಲ್ಲಿ ಹಿಂದೆಂದಿಗಿಂತಲೂ ಮಹಾತ್ಮ ಗಾಂಧೀಜಿ ರವರ ಚಿಂತನೆ, ವಿಚಾರಧಾರೆಗಳು ಇಂದು ಹೆಚ್ಚು ಪ್ರಸ್ತುತವಾಗಿದೆ ಎಂದು ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್‌ ಹೇಳಿದ್ದಾರೆ. 

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಶನಿವಾರ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೆಂಪೇಗೌಡ ಕಾನೂನು ಮಹಾ ವಿದ್ಯಾಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಿಂದ ಬಾ-ಬಾಪು: 150ನೇ ವರ್ಷಾಚರಣೆ ಅಂಗವಾಗಿ ಗಾಂಧಿ ಪ್ರಸ್ತುತತೆ ಕುರಿತ ವಿಚಾರ ಸಂಕಿರಣದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು,  ಗಾಂಧಿ ಹೇಳಿದಂತೆ ಪ್ರತಿಯೊಬ್ಬ ವ್ಯಕ್ತಿ ಶ್ರೇಷ್ಠನಾಗಬೇಕು. ಆದರೆ ಇವತ್ತು ಕೆಲವೇ ವ್ಯಕ್ತಿಗಳು ಮಾತ್ರ ಶ್ರೇಷ್ಠರಾಗುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಆತಂಕಕಾರಿ ಎಂದರು. 

ಕೊಳ್ಳಬಾಕ ಸಂಸ್ಕೃತಿ ಇಂದು ದೇಶದ ಸಮಗ್ರತೆ, ಸಾರ್ವಭೌಮತ್ವವನ್ನು ನಾಶಪಡಿಸಲು ಹೊರಟಿದೆ. ಇಂದಿಗೂ ಅಸಮಾನತೆ, ಅಸ್ಪೃಶ್ಯತೆ ಹೆಚ್ಚಾಗಿದೆ. ಗಾಂಧಿ ಚಿಂತನೆಗಳನ್ನು ನಾವು ರೂಢಿಸಿಕೊಳ್ಳದೇ ಮಾನವೀಯ ಹಾಗೂ ನೈತಿಕ ಸಮಾಜ ನಿರ್ಮಿಸಲು ಸಾಧ್ಯವಿಲ್ಲ ಎಂದರು.

SCROLL FOR NEXT