ಸಂಗ್ರಹ ಚಿತ್ರ 
ರಾಜ್ಯ

ಮಡಿಕೇರಿ:ಪತ್ನಿ ಮೇಲೆ ಸಂಶಯಕ್ಕೆ 30 ಬಾರಿ ಇರಿದು  ಕೊಂದ ಪತಿರಾಯ!

ಪತ್ನಿಯ ನಡತೆ ಸರಿಯಿಲ್ಲ ಎಂದು ಶಂಕಿಸಿ ಪತಿಯೊಬ್ಬ ಆಕೆಯನ್ನು ಮೂವತ್ತು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಹೊಸ ಬಡಾವಣೆಯಲ್ಲಿ ನಡೆದಿದೆ. 

ಮಡಿಕೇರ: ಪತ್ನಿಯ ನಡತೆ ಸರಿಯಿಲ್ಲ ಎಂದು ಶಂಕಿಸಿ ಪತಿಯೊಬ್ಬ ಆಕೆಯನ್ನು ಮೂವತ್ತು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಹೊಸ ಬಡಾವಣೆಯಲ್ಲಿ ನಡೆದಿದೆ.

ಜುಬೈದಾ(25) ಕೊಲೆಯಾದ ಮಹಿಳೆ. ಷರೀಫ್ ಎಂಬುವವರ ಜೊತೆ ಏಳು ವರ್ಷದ ಹಿಂದೆ ಜುಬೈದಾ ಮದುವೆಯಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಕೂಡ ಇದ್ದು, ನಡತೆ ಸರಿಯಲ್ಲ ಎಂಬ ವಿಚಾರಕ್ಕೆ ಪತಿ ಕಳೆದ ರಾತ್ರಿ ಪತ್ನಿಯೊಂದಿಗೆ ಜಗಳ ಮಾಡಿದ್ದಾನೆ.

ಜಗಳ ತಾರಕಕ್ಕೇರಿದ ಪರಿಣಾಮ ಆತ ಪತ್ನಿಯನ್ನು 30 ಬಾರಿ ಚಾಕುವಿನಿಂದ ಇರಿದಿದ್ದು, ತೀವ್ರರಕ್ತ ಸ್ರಾವದಿಂದ ಆಕೆ ಮೃತಪಟ್ಟಿದ್ದಾಳೆ. ಶನಿವಾರ ರಾತ್ರಿ 10.30ಕ್ಕೆ ಈ ಘಟನೆ ನಡೆದಿದೆ.

ಘಟನೆ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪತಿಯನ್ನು ವಶಕ್ಕೆ ಪಡೆದಿರುವ ಪೋಲೀಸರು ವಿಚಾರಣೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!