ಸೂರಾಪುರ ಗ್ರಾಮದಲ್ಲಿ ಟವರ್​​ ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ! 
ರಾಜ್ಯ

ಸೂರಾಪುರ ಗ್ರಾಮದಲ್ಲಿ ಟವರ್​​ ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ!

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಹತ್ತಿದ್ದಾನೆ. ಜಿಲ್ಲೆಯ ಕೊಳ್ಳೇಗಾಲ ಸಮೀಪದ ಸುರಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ರವಿ ಎಂಬಾತ ಟವರ್ ಏರಿ ಆತ್ಮಹತ್ಯೆ ಬೆದರಿಕೆ ಒಡ್ಡಿದ್ದಾನೆ.

ಚಾಮರಾಜನಗರ: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿದ್ದಾನೆ. ಜಿಲ್ಲೆಯ ಕೊಳ್ಳೇಗಾಲ ಸಮೀಪದ ಸುರಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ರವಿ ಎಂಬಾತ ಟವರ್ ಏರಿ ಆತ್ಮಹತ್ಯೆ ಬೆದರಿಕೆ ಒಡ್ಡಿದ್ದಾನೆ.

ರವಿಯು ಅದೇ ಗ್ರಾಮದ ಟೆಲಿಫೋನ್ ಎಕ್ಸ್​ಚೇಂಜ್​ನಲ್ಲಿ 17 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ. ಆದರೆ ಶುಕ್ರವಾರ ಆತನನ್ನು ಇದ್ದಕ್ಕಿಂದ್ದಂತೆ ನೌಕರಿಯಿಂದ ತೆಗೆದು ಹಾಕಿದ್ದಾರೆ ಎನ್ನಲಾಗಿದೆ. ಹಾಗೆಯೇ ತನ್ನ ಸಹೋದ್ಯೋಗಿ ಬಸವಣ್ಣ ಎಂಬಾತನಿಗೆ ರವಿಯು 50 ಸಾವಿರ ರೂಪಾಯಿ ಸಾಲ ನೀಡಿದ್ದನಂತೆ. ಆ ವ್ಯಕ್ತಿ ಸಾಲ ಹಿಂದಿರುಗಿಸದೇ ಸತಾಯಿಸಿದ್ದಾನೆ.

ಈ ಎರಡು ಘಟನೆಗಳಿಂದ ಮನನೊಂದು ರವಿ ಟವರ್ ಏರಿದ್ದಾನೆ. ಇನ್ನು ವಿಷಯ ತಿಳಿದ ಕೊಳ್ಳೇಗಾಲ ಸಿಪಿಐ ಶ್ರೀಕಾಂತ್ ಸ್ಥಳಕ್ಕೆ ಭೇಟಿ ನೀಡಿ, ಸಾಲ ಹಿಂತಿರುಗಿಸಿಕೊಡುವ ಭರವಸೆ ನೀಡಿದ್ದಾರೆ. ಅಲ್ಲದೆ ಪತ್ನಿಯಿಂದ ಫೋನ್ ಮೂಲಕ ಮಾತನಾಡಿಸಿ ಮನವೊಲಿಸಿದ್ದಾರೆ. ಬಳಿಕ ಇನ್ನು ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಆತನನ್ನು ಕೆಳಗಿಳಿಸಲಾಗಿದೆ.

ವರದಿ: ಗೂಳಿಪುರ ನಂದೀಶ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ