ಸಂಗ್ರಹ ಚಿತ್ರ 
ರಾಜ್ಯ

ಚಾಲಕನ ನಿರ್ಲಕ್ಷ್ಯ: ಎರಡು ಬಸ್'ಗಳ ಮಧ್ಯೆ ಸಿಲುಕಿ ವಿದ್ಯಾರ್ಥಿನಿ ಸಾವು 

ಚಾಲಕನ ನಿರ್ಲಕ್ಷ್ಯದಿಂದ ವಿದ್ಯಾರ್ಥಿನಿಯೋರ್ವಳು ಎರಡು ಬಸ್'ಗಳ ಮಧ್ಯೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೋಲಾರದ ಮಾಲೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. 

ಕೋಲಾರ: ಚಾಲಕನ ನಿರ್ಲಕ್ಷ್ಯದಿಂದ ವಿದ್ಯಾರ್ಥಿನಿಯೋರ್ವಳು ಎರಡು ಬಸ್'ಗಳ ಮಧ್ಯೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೋಲಾರದ ಮಾಲೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. 

ಮಾಲೂರು ತಾಲೂಕಿನ ಲಕ್ಕೂರು ಹೋಬಳಿಯ ತಾಳುಕುಂಟೆ ಗ್ರಾಮದ ನಿವಾಸಿ ದೀಪಿಕಾ (16) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಕಾಲೇಜು ಮುಗಿಸಿ ಮನೆಗೆ ತೆರಳಲು ಬಸ್ ನಿಲ್ದಾಣಕ್ಕೆ ಬಂದಿದ್ದ ದೀಪಿಕಾ ಬಸ್ ಕಡೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. 

ಮೃತ ದೀಪಿಕಾ ಸರ್ಕಾರ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ನಿಲ್ದಾಣದಲ್ಲಿ ಹಿಂದೆ ಮುಂದೆ ನಿಂತಿದ್ದ ಖಾಸಗಿ ಬಸ್ ಮತ್ತು ಸರ್ಕಾರಿ ಬಸ್ ಗಳ ನಡುವೆ ಹೋಗಿದ್ದಾಳೆ. ಇದನ್ನು ಗಮನಿಸದ ಖಾಸಗಿ ಬಸ್ ಚಾಲಕ ಬಸ್ ಚಲಾಯಿಸಿದ್ದಾನೆ. ಪರಿಣಾಮ ಎರಡು ಬಸ್ಸುಗಳ ಮಧ್ಯೆ ಸಿಲುಕಿ ದೀಪಿಕಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. 

ಘಟನೆ ಸಂಭವಿಸುತ್ತಿದ್ದಂತೆಯೇ ವಿವಿಧ ಸಂಘಟನೆಗಳು, ವಿದ್ಯಾರ್ಥಿಗಳು ಸ್ಥಳಕ್ಕೆ ಧಾವಿಸಿ ಆಕ್ರೋಶ ವ್ಯಕ್ತಪಡಿಸಿದರು. ನಿಲ್ದಾಣದಲ್ಲಿ ಖಾಸಗಿ ಬಸ್ ಮತ್ತು ಸರ್ಕಾರಿ ಬಸ್ ಗಳು ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಎಂದು ಪ್ರತಿಭಟನಾನಿರತರು ಆರೋಪಿಸಿದರು. ಪ್ರತಿಭಟನೆಗೆ ವಿದ್ಯಾರ್ಥಿಗಳು ಕೈಜೋಡಿಸುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಡಿವೈಎಸ್ಪಿ ಮತ್ತು ಅವರ ತಂಡ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ, ಪ್ರತಿಭಟನೆ ತಣ್ಣಗಾಗುವಂತೆ ಮಾಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್