ರಾಜ್ಯ

ಸುಪ್ರೀಂ ಕೋರ್ಟ್ ತೀರ್ಪಿನ ಮೇಲೆ ಉಪ ಚುನಾವಣೆ ನಿರ್ಧಾರ..?

Vishwanath S

ಬೆಂಗಳೂರು: 17 ಶಾಸಕರ ಅನರ್ಹತೆ ಪ್ರಕರಣದ ತೀರ್ಪನ್ನು ಸುಪ್ರಿಂ ಕೋರ್ಟ್ ಕಾಯ್ದರಿಸಿದ್ದು,ನವೆಂಬರ್ 8 ರಂದು ಸುಪ್ರೀಂ ಕೋರ್ಟ್ ನ ನ್ಯಾ.ರಮಣ ನೇತೃತ್ವದ ತ್ರಿಸದಸ್ಯ ಪೀಠ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. 

ಈ ತೀರ್ಪು ದೇಶದ ಪ್ರಜಾಪ್ರತಿನಿಧಿ ಕಾಯ್ದೆಗೆ ಹೊಸ ಭಾಷ್ಯ ಬರೆಯುವ,ಹೊಸ ಆಯಾಮಕ್ಕೆ ನಾಂದಿಯಾಗುವ ಸಾಧ್ಯತೆಯಿದೆ.

ಈ ನಡುವೆ ತೀರ್ಪು ಪ್ರಕಟಿಸುವ ದಿನಾಂಕದಲ್ಲಿ ಬದಲಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂಬ ಮಾತುಗಳು ನ್ಯಾಯಾಂಗ ತಜ್ಞರ ವಲಯದಲ್ಲಿ ಕೇಳಿ ಬರುತ್ತಿದೆ.

ಅನರ್ಹ ಶಾಸಕರ ಪರ ವಕೀಲರ ಪ್ರಕಾರ, ಶುಕ್ರವಾರ ಬಹುತೇಕ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ನೀಡುವ ಸಾಧ್ಯತೆ ಇದೆ. ಆದರೆ ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ನಡೆದ ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಆಡಿಯೋ ಪ್ರಕರಣವನ್ನು ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಪರ ವಕೀಲರು ಮಂಡಿಸಿರುವ ಹಿನ್ನೆಲೆಯಲ್ಲಿ ತೀರ್ಪು ಹೊರ ಬೀಳುವುದು ಮತ್ತಷ್ಟು ವಿಳಂಬವಾ ಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎನ್ನಲಾಗಿದೆ.

SCROLL FOR NEXT