ರಾಜ್ಯ

96 ತಾಲ್ಲೂಕುಗಳೂ ಅತಿವೃಷ್ಠಿ - ಪ್ರವಾಹ ಪೀಡಿತ ಪ್ರದೇಶಗಳು: ರಾಜ್ಯ ಸರ್ಕಾರ ಘೋಷಣೆ

Lingaraj Badiger

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಮುಂಗಾರು ಋತುವಿನಲ್ಲಿ ಅಕ್ಟೋಬರ್ ಮಾಹೆಯಲ್ಲಿ ಅತಿವೃಷ್ಟಿ- ಪ್ರವಾಹದಿಂದಾಗಿ ಜೀವ ಹಾನಿ, ಬೆಳೆ ಹಾನಿ ಹಾಗೂ ಮೂಲ ಸೌಕರ್ಯಗಳು ಹಾನಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ 15 ಜಿಲ್ಲೆಗಳ 55 ತಾಲ್ಲೂಕುಗಳನ್ನು “ಅತಿವೃಷ್ಟಿ-ಪ್ರವಾಹ ಪೀಡಿತ ಪ್ರದೇಶಗಳು” ಎಂದು ಘೋಷಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಮತ್ತು ಗುಬ್ಬಿ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಮತ್ತು ಹೊಸದುರ್ಗ, ದಾವಣಗೆರೆ ಜಿಲ್ಲೆಯ ಚನ್ನಗಿರಿ, ದಾವಣಗೆರೆ ಮತ್ತು ಹೊನ್ನಾಳಿ, ಬಳ್ಳಾರಿ ಜಿಲ್ಲೆಯ ಹಡಗಲಿ, ಹಗರಿಬೊಮ್ಮನಹಳ್ಳಿ ಮತ್ತು ಹರಪ್ಪನಹಳ್ಳಿ, ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಗೋಕಾಕ್ ಮತ್ತು ಖಾನಾಪುರ, ಬಾಗಲಕೋಟೆ ಜಿಲ್ಲೆಯ ಮುಧೋಳ, ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾವೇರಿ, ಹಿರೇಕೆರೂರು, ರಾಣಿಬೆನ್ನೂರು ಮತ್ತು ಶಿಗ್ಗಾಂವ, ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ, ಕಲಘಟಗಿ ಮತ್ತು ಕುಂದಗೋಳ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊಸನಗರ, ಸಾಗರ, ಶಿಕಾರಿಪುರ, ಶಿವಮೊಗ್ಗ ಮತ್ತು ಸೊರಬ. ಚಿಕ್ಕಮಗಳೂರು ಜಿಲ್ಲೆಯ ಕಡೂರು, ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿ ಮತ್ತು ತರೀಕೆರೆ, ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ಸೋಮವಾರಪೇಟೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಮತ್ತು ಪುತ್ತೂರು. ಉಡುಪಿ ಜಿಲ್ಲೆಯ ಕಾರ್ಕಳ, ಕುಂದಾಪುರ ಮತ್ತು ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲ, ಭಟ್ಕಳ, ಹಳಿಯಾಳ, ಹೊನ್ನಾವರ, ಕಾರವಾರ, ಕುಮಟ, ಸಿದ್ದಾಪುರ, ಶಿರಸಿ, ಜೊಯಿಡಾ ಮತ್ತು ಯಲ್ಲಾಪುರ ತಾಲ್ಲೂಕುಗಳನ್ನು “ಅತಿವೃಷ್ಟಿ-ಪ್ರವಾಹ ಪೀಡಿತ ಪ್ರದೇಶಗಳು” ಎಂದು ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದಲ್ಲದೇ ಮತ್ತೊಂದು ಆದೇಶದಲ್ಲಿ 13 ಜಿಲ್ಲೆಗಳ 41 ತಾಲ್ಲೂಕುಗಳನ್ನು ಮುಂದಿನ ಆದೇಶದವರಗೆ “ಅತಿವೃಷ್ಟಿ-ಪ್ರವಾಹ ಪೀಡಿತ ಪ್ರದೇಶಗಳು” ಎಂದು ಘೋಷಿಸಲಾಗಿದೆ.

SCROLL FOR NEXT