ರಾಜ್ಯ

ಅಯೋಧ್ಯೆ ತೀರ್ಪು: ಅನುಮಾನಾಸ್ಪದರ ಫೋನ್, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ

Manjula VN

ಬೆಂಗಳೂರು: ರಾಮ ಜನ್ಮ ಭೂಮಿ ಅಯೋಧ್ಯೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಇನ್ನು ಕೆಲವೇ ದಿನಗಳಲ್ಲಿ ತೀರ್ಪು ನೀಡಲಿದ್ದು, ಈ ಹಿನ್ನೆಲೆಯಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಫೋನ್'ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ನಿಗಾ ಇರಿಸಿದ್ದಾರೆ. 

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ಎರಡೂ ಸಮುದಾಯದ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದೇವೆ. ಮಾತುಕತೆ ವೇಳೆ ಧನಾತ್ಮಕ ಪ್ರತಿಕ್ರಿಯೆಗಳು ಬಂದಿವೆ. ಎರಡೂ ಸಮುದಾಯದ ಸದಸ್ಯರು ಸಹಕಾರ ನೀಡಿದ್ದಾರೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಅನುಮಾನಾಸ್ಪದ ವ್ಯಕ್ತಿಗಳ ಫೋನ್'ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸುವಂತೆ ಸೂಚಿಗಳು ಬಂದಿವೆ ಎಂದು ಮಂಗಳೂರು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

SCROLL FOR NEXT