ರಾಜ್ಯ

ಕರವೇ ಕಾರ್ಯಕರ್ತರು ಕ್ಷಮೆ ಕೇಳುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ: ವೈದ್ಯರು 

Sumana Upadhyaya

ಬೆಂಗಳೂರು: ಮಿಂಟೊ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಖಂಡಿಸಿ ರಾಜ್ಯಾದ್ಯಂತ  ಶುಕ್ರವಾರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗವನ್ನು (ಒಪಿಡಿ) ಬಂದ್‌ ಮಾಡಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು ಅದು ಇಂದು 7ನೇ ದಿನಕ್ಕೆ ಕಾಲಿಟ್ಟಿದೆ. 


ರಾಜ್ಯಾದ್ಯಂತ ಇರುವ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳ ಒಪಿಡಿ ಸೇವೆ ಬಂದ್ ಆಗಿದ್ದು ಇದರಿಂದ ರೋಗಿಗಳ ತುರ್ತು ಸೇವೆಗೆ ವ್ಯತ್ಯಯವುಂಟಾಗಲಿದೆ. 


ಮೊನ್ನೆ ಕನ್ನಡ ರಾಜ್ಯೋತ್ಸವ ದಿನದಂದು ಮಿಂಟೋ ಆಸ್ಪತ್ರೆಗೆ ನುಗ್ಗಿ ಗಲಾಟೆ ಮಾಡಿ ಕೆಲ ವೈದ್ಯರ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಅವರು ಕ್ಷಮೆ ಕೇಳುವವರೆಗೆ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ.ಕರವೇ ಕಾರ್ಯಕರ್ತರು ಶರಣಾಗುವವರೆಗೂ ಪ್ರತಿಭಟನೆ ವಾಪಸ್ ತೆಗೆದುಕೊಳ್ಳುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ ಶ್ರೀನಿವಾಸ್ ತಿಳಿಸಿದ್ದಾರೆ.


ಇಂದು ಬೆಳಗ್ಗೆ 11 ಗಂಟೆಗೆ ಪೊಲೀಸರ ಮುಂದೆ ಶರಣಾಗುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹೇಳಿದ್ದಾರೆ. ನಾವು ಮಿಂಟೊ ಆಸ್ಪತ್ರೆಯ ಮುಂದೆ ಸಭೆ ಸೇರಿ ಕರವೇ ಕಾರ್ಯಕರ್ತರು ಶರಣಾದ ಬಳಿಕ ನಾವು ಪ್ರತಿಭಟನೆ ಹಿಂತೆಗೆದುಕೊಳ್ಳುತ್ತೇವೆ.  ನಮಗೆ ರೋಗಿಗಳ ಆರೋಗ್ಯ ಸೇವೆ, ಚಿಕಿತ್ಸೆಗೆ ತೊಂದರೆ ಮಾಡಬೇಕೆಂಬ ಉದ್ದೇಶ ಖಂಡಿತಾ ಇಲ್ಲ. ಹಾಗೆಂದು ವೈದ್ಯರ ಮೇಲೆ ಈ ರೀತಿ ಪದೇ ಪದೇ ಆಗುವ ಹಲ್ಲೆಯನ್ನು ಸಹಿಸಲು ಸಾಧ್ಯವಿಲ್ಲ. ಆಸ್ಪತ್ರೆಯ ಸೇವೆಯಲ್ಲಿ ವ್ಯತ್ಯಯವಾದರೆ ಪ್ರಶ್ನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಸರ್ಕಾರಿ ರಜೆ ದಿನ ಏಕಾಏಕಿ ಬಂದು ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದರೆ ಅಂತಹ ಕ್ರಮವನ್ನು ಸಹಿಸಲು ಸಾಧ್ಯವಿಲ್ಲ ಎಂದು ಶ್ರೀನಿವಾಸ್ ಹೇಳಿದರು.

SCROLL FOR NEXT