ರಾಜ್ಯ

ಮಾಜಿ ಸಿಎಂ ಜೆಹೆಚ್ ಪಟೇಲ್ ಪತ್ನಿ ಸರ್ವಮಂಗಳಮ್ಮ ನಿಧನ: ಸಿಎಂ ಯಡಿಯೂರಪ್ಪ ಸಂತಾಪ

Srinivas Rao BV

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ದಿವಂಗತ ಜೆ.ಎಚ್.ಪಟೇಲ್ ಅವರ ಪತ್ನಿ ಸರ್ವಮಂಗಳಮ್ಮ ಪಟೇಲ್ (85) ಶನಿವಾರ ವಿಧಿವಶರಾಗಿದ್ದಾರೆ.

ವಯೋಸಹಜ ಆರೋಗ್ಯ ಸಮಸ್ಯೆಬಳಲುತ್ತಿದ್ದ ಸರ್ವಮಂಗಳಮ್ಮ ಬೆಂಗಳೂರಿನ ಡಾಲರ್ಸ್ ಕಾಲೋನಿಯ ಪುತ್ರ ಮಹಿಮಾ ಪಟೇಲ್ ಮನೆಯಲ್ಲಿ ನಿಧನರಾಗಿದ್ದಾರೆ.. ಸರ್ವಮಂಗಳಮ್ಮ ಮಾಜಿ ಶಾಸಕ, ಪುತ್ರ ಮಹಿಮಾ ಪಟೇಲ್ ಸೇರಿ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಸ್ವಗ್ರಾಮ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾರಿಗನೂರಿನಲ್ಲಿ ಸಾರ್ವಜನಿಕ ದರ್ಶನದ ಬಳಿಕ ಅವರ ಜಮೀನಿನಲ್ಲಿ ಇರುವ ಮಾಜಿ ಸಿಎಂ ಜೆ.ಎಚ್.ಪಟೇಲ್ ಸಮಾಧಿ ಪಕ್ಕದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಶ್ರೀಮತಿ ಸರ್ವಮಂಗಳ ಪಟೇಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ 

ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲರ ಪತ್ನಿ ಶ್ರೀಮತಿ ಸರ್ವಮಂಗಳ ಪಟೇಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸರಳತೆ, ಸಜ್ಜನಿಕೆಯ ಸಾಕಾರ ಮೂರ್ತಿ ಯಾಗಿದ್ದ ಸರ್ವಮಂಗಳ ಪಟೇಲ್ ಅವರು ಜೆ.ಎಚ್. ಪಟೇಲರ ಬದುಕಿನ ಎಲ್ಲ ಮಜಲುಗಳಲ್ಲಿ ಬೆಂಬಲವಾಗಿ ನಿಂತವರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿ ಯವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

SCROLL FOR NEXT