ರಾಜ್ಯ

ಅಯೋಧ್ಯೆ ತೀರ್ಪು ಏನೇ ಆಗಿರಲಿ. ಶಾಂತಿ-ಸೌಹಾರ್ದತೆಯ ಅಂತಃಶಕ್ತಿ ಜಗದ ಬೆಳಕಾಗಲಿ: ಸಿಎಂ ಯಡಿಯೂರಪ್ಪ

Manjula VN

ಬೆಂಗಳೂರು: ಅಯೋಧ್ಯೆ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ಶನಿವಾರ ತೀರ್ಪು ನೀಡಲಿದ್ದು, ತೀರ್ಪು ಯಾರದೇ ಪರವಿರಲಿ, ವಿರುದ್ಧವಿರಲಿ ಉದ್ವೇಗಕ್ಕೆ ಒಳಗಾಗದೆ ಸಮಚಿತ್ತದಿಂದ ಸ್ವೀಕರಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಅಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಶತಮಾನದಷ್ಟು ಹಳೆಯದಾದ ಅಯೋಧ್ಯೆ ವಿವಾದ ಕುರಿತು ಸುಪ್ರೀಂಕೋರ್ಟ್ ಇಂದು ಐತಿಹಾಸಿಕ ತೀರ್ಪು ಪ್ರಕಟಿಸಲಿದೆ. ತೀರ್ಪು ಏನೇ ಆಗಿರಲಿ, ಶಾಂತಿ-ಸೌಹಾರ್ದತೆಯ ಅಂತಃಶಕ್ತಿ ಜಗದ ಬೆಳಕಾಗಲಿ ಎಂದು ಹೇಳಿದ್ದಾರೆ. ಟ

ತೀರ್ಪುಯಾರದೇ ಪರವಿರಲಿ, ವಿರುದ್ಧವಿರಲಿ ಉದ್ವೇಗಕ್ಕೆ ಒಳಗಾಗದೆ ಸಮಚಿತ್ತರಿಂದ ಸ್ವೀಕರಿಸೋಣ. ರಾಷ್ಟ್ರದ ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಗೌರವಿಸೋಣ ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳೋಣ ಎಂದು ತಿಳಿಸಿದ್ದಾರೆ. 

SCROLL FOR NEXT