ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಜ್ಯೂಸ್ ಎಂದು ಕಳೆನಾಶಕ ಕುಡಿದು ಬಾಲಕ ಸಾವು

ಜ್ಯೂಸ್ ಎಂದು ಭಾವಿಸಿ ಕಳೆನಾಶಕ ಕುಡಿದು ಮೂರು ವರ್ಷದ ಬಾಲಕ  ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ. 

ಚಿಕ್ಕಮಗಳೂರು: ಜ್ಯೂಸ್ ಎಂದು ಭಾವಿಸಿ ಕಳೆನಾಶಕ ಕುಡಿದು ಮೂರು ವರ್ಷದ ಬಾಲಕ  ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ. 

ಅಕ್ಟೋಬರ್ 24ರಂದು ಕಳೆನಾಶಕ ಸೇವಿಸಿದ್ದ ಮಗು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಅಕ್ಟೋಬರ್ 24ರಂದು ಜ್ಯೂಸ್‌ ಎಂದು ಭಾವಿಸಿ 3 ವರ್ಷದ ಮಗು ಅಗಸ್ತ್ಯ ಕಳೆನಾಶಕವನ್ನು ಸೇವಿಸಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಪ್ರವೀಣ್-ಪೂಜಿತ ದಂಪತಿಯ ಏಕೈಕ ಪುತ್ರನಾಗಿದ್ದ ಅಗಸ್ತ್ಯನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. 

ಆದರೆ 18 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಮಗು ಮೃತಪಟ್ಟಿದೆ. ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಗಸ್ತ್ಯ ಸಾವಿಗೀಡಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ