ರಾಜ್ಯ

14 ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ ಪ್ರಾರಂಭ, ಮಂಗಳೂರಿನಲ್ಲಿ ನಳಿನ್ ಕಟೀಲ್ ಹಕ್ಕು ಚಲಾವಣೆ

Raghavendra Adiga

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಕೆಲವೆಡೆ ಸ್ಥಳೀಯ ಸಂಸ್ಥೆಗಳಿಗೆ ಮತದಾನ ಆರಂಭಗೊಂಡಿದ್ದು, ಸಂಜೆ 6 ಗಂಟೆವರೆಗೆ ನಡೆಯಲಿದೆ.

2 ಮಹಾನಗರ ಪಾಲಿಕೆ, 6 ನಗರಸಭೆ, 3 ಪುರಸಭೆ, 3 ಪಟ್ಟಣ ಪಂಚಾಯಿತಿಗಳಿಗೆ ಇಂದು ಮತದಾನ ಪ್ರಗತಿಯಲ್ಲಿದೆ. ದಾವಣಗೆರೆ ಮಹಾನಗರ ಪಾಲಿಕೆ, ಮಂಗಳೂರು ಮಹಾನಗರ ಪಾಲಿಕೆ, ಚಿಕ್ಕಬಳ್ಳಾಪುರ, ಕನಕಪುರ, ಕೋಲಾರದ 3 ನಗರಸಭೆಗಳಿಗೆ ಮತದಾನ ನಡೆಯುತ್ತಿದೆ. ಮಾಗಡಿ ಪುರಸಭೆ, 3 ಪಟ್ಟಣ ಪಂಚಾಯಿತಿಗಳಿಗೂ ಮತದಾನ ನಡೆಯುತ್ತಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಿಗೆ ಇಂದು ಬೆಳಗ್ಗೆ 7ಗಂಟೆಯಿಂದ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿದೆ. ಬೆಳಗಿನಿಂದಲೇ ಮತದಾನ ಚುರುಕಾಗಿದ್ದು ನಗರದ ಲೇಡಿಹಿಲ್ ಸಮೀಪದ ಸೆಂಟ್ ಅಲೋಷಿಯಸ್ ಶಾಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಹಕ್ಕು ಚಲಾಯಿಸಿದ್ದಾರೆ. ಇನ್ನೊಂದೆಡೆ ಉರ್ವ ಮಾರಿಗುಡಿ ಸಮೀಪದ ಸರ್ಕಾರಿ ಶಾಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಮತದಾನ ಮಾಡಿದ್ದಾರೆ.

ಒಟ್ಟಾರೆ 418 ವಾರ್ಡ್ ಗಳಿಗೆ ಮತದಾನ ನಡೆಯುತ್ತಿದ್ದು ಮತದಾನದ ಸ್ಥಳಗಳಲ್ಲಿ ರಜೆ ಘೊಷಿಸಲಾಗಿದೆ.

SCROLL FOR NEXT