ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಆಸಿಡ್ ಕುಡಿದು ದಂಪತಿ ಆತ್ಮಹತ್ಯೆ

ಸಾಲದ ಸಮಸ್ಯೆಯಿಂದ ದಂಪತಿ ಶೌಚಾಲಯ ಸ್ವಚ್ಛಗೊಳಿಸುವ ಬ್ಲಿಚಿಂಗ್ ಆಸಿಡ್ ಕುಡಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.

ಬೆಂಗಳೂರು: ಸಾಲದ ಸಮಸ್ಯೆಯಿಂದ ದಂಪತಿ ಶೌಚಾಲಯ ಸ್ವಚ್ಛಗೊಳಿಸುವ ಬ್ಲಿಚಿಂಗ್ ಆಸಿಡ್ ಕುಡಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.

ಮಂಜುನಾಥ ನಗರದ ಪುಷ್ಪಾಂಜಲಿ ಚಿತ್ರಮಂದಿರದ ಬಳಿ ವಾಸಿಸುತ್ತಿದ್ದ ಮೋಹನ್ (62) ಹಾಗೂ ಅವರ ಪತ್ನಿ ನಿರ್ಮಲಾ (50) ಆತ್ಮಹತ್ಯೆಗೆ ಶರಣಾದ ದಂಪತಿ.

ಬೆಮೆಲ್‌ನ ನಿವೃತ್ತ ನೌಕರರಾಗಿದ್ದ ಮೋಹನ್ ಮಂಜುನಾಥ ನಗರದಲ್ಲಿ ಎರಡು ಮನೆ ಕಟ್ಟಿದ್ದರು. ಒಂದು ಮನೆಯಲ್ಲಿ ಮೋಹನ್ ತನ್ನ ಪತ್ನಿಯೊಂದಿಗೆ ವಾಸಿಸುತ್ತಿದ್ದರೆ, ಮತ್ತೊಂದು ಮನೆಯಲ್ಲಿ ಮಗ ಹಾಗೂ ಸೊಸೆ ನೆಲೆಸಿದ್ದರು.

ನಿವೃತ್ತಿ ಜೀವನ ನಡೆಸುತ್ತಿದ್ದ ಇವರು ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದರು. ಇದೇ ನೋವಿನಿಂದ ರಾತ್ರಿ ಹನ್ನೊಂದಕ್ಕೆ ಸುಮಾರು ಶೌಚಾಲಯ ಸ್ವಚ್ಚಗೊಳಿಸುವ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಕ್ತ ಖಾರಿಕೊಂಡ ಇಬ್ಬರೂ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಬೆಳಿಗ್ಗೆ ಮಗ ಬಾಗಿಲು ಬಡಿದರೆ ತೆಗೆಯಲಿಲ್ಲ. ಎಷ್ಟು ಪ್ರಯತ್ನಿಸಿದರೂ ಬಾಗಿಲು ತೆರೆಯದಾದಾಗ ಬಾಗಿಲು ಒಡೆದು ನೊಡಲಾಗಿ ಇಬ್ಬರ ಬಾಯಲ್ಲಿ ರಕ್ತ ಸುರಿದು ಮೃತಪಟ್ಟಿರುವುದು ಗೊತ್ತಾಗಿದೆ. ಕೂಡಲೇ ಆತ ಬಸವೇಶ್ವರ ನಗರ ಪೋಲೀಸರಿಗೆ ಮಾಹಿತಿ ನೀಡಿದ್ದಾನೆ.

ಇನ್ನು ಆತ್ಮಹತ್ಯೆಗೆ ಮುನ್ನ ಮೋಹನ್ ಡೆತ್ ನೊಟ್ ಬರೆದಿಟ್ಟಿದ್ದು ಇದು ತಮಿಳಿನಲ್ಲಿದೆ. ಆರ್ಥಿಕ ಸಂಕಷ್ಟವೇ ಆತ್ಮಹತ್ಯೆಗೆ ಹಾರಣವೆಂದು ಸಂದೇಹ ವ್ಯಕ್ತವಾಗಿದೆ. ಪ್ರಕತಣ ದಾಖಲಿಸಿಕೊಂಡಿರುವ ಪೋಲೀಸರುಹೆಚ್ಚಿನ ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT