ಯಡಿಯೂರಪ್ಪ 
ರಾಜ್ಯ

ಸಹಕಾರಿ ಬ್ಯಾಂಕ್‌ ಸಾಲ ಮನ್ನಾಗೆ 1 ಸಾವಿರ ಕೋಟಿ: ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

ಸುಮಾರು 25 ಲಕ್ಷ ರೈತರಿಗೆ ಅನುಕೂಲವಾಗುವ ಯಶಸ್ವಿನಿ ಯೋಜನೆಯ ಮತ್ತೊಮ್ಮೆ ಜಾರಿ,ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದ ರೈತ ಸಾಲ ಮನ್ನಾ ಮಾಡುವ ಕಾರ್ಯಕ್ರಮಕ್ಕೆ 1 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.

ತುಮಕೂರು: ಸುಮಾರು 25 ಲಕ್ಷ ರೈತರಿಗೆ ಅನುಕೂಲವಾಗುವ ಯಶಸ್ವಿನಿ ಯೋಜನೆಯ ಮತ್ತೊಮ್ಮೆ ಜಾರಿ,ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದ ರೈತ ಸಾಲ ಮನ್ನಾ ಮಾಡುವ ಕಾರ್ಯಕ್ರಮಕ್ಕೆ 1 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.

ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಪೆಕ್ಸ್ ಬ್ಯಾಂಕ್ ವತಿ ಯಿಂದ ಹಮ್ಮಿಕೊಂಡಿದ್ದ 66ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು,ತಿಪಟೂರಿನಲ್ಲಿ ತೋಟಗಾರಿಕೆ ಕಾಲೇಜು ಆರಂಭಿಸಲು ಅನುಮತಿ ನೀಡುವ ಭರವಸೆ ನೀಡಿದರು.

ರಾಜ್ಯದ ಉತ್ತರ ಭಾಗದಲ್ಲಿ ಅತಿವೃಷ್ಟಿಯಿಂದ 7 ಲಕ್ಷ ಎಕರೆ ಭೂಮಿ ನಾಶವಾಯಿತು.ಮೂರು ನಾಲ್ಕು ಲಕ್ಷ ಮನೆ ಗಳು ಬಿದ್ದು ಹೋದವು.ನೂರಾರು ಗ್ರಾಮಗಳು ನೀರು ಪಾಲಾದವು.ಜನರು ಬೀದಿಗೆ ಬಿದ್ದರು.ಈ ಸಂಕಷ್ಟಗಳಿಗೆ ಸ್ಪಂದಿಸಲು ಪ್ರಯತ್ನ ನಡೆಯುತ್ತಿದೆ.ಹೀಗಾಗಿ ಕೆಲವು ಕಡೆಗಳಲ್ಲಿ ಹೆಚ್ಚಿನ ಗಮನ ಕೊಡಲು ಆಗಲಿಲ್ಲ ಎಂದು ಅವರು ಹೇಳಿದ್ದಾರೆ. 

ಯಶಸ್ವಿನಿ ಯೋಜನೆ ಇನ್ನೊಂದು ತಿಂಗಳೊಳಗಾಗಿ ಪುನಾರಂಭ ಮಾಡಲಾಗುವುದು, ಹಾಲು ಒಕ್ಕೂಟದಡಿಯಲ್ಲಿ ತುಮಕೂರು ಜಿಲ್ಲೆಯಲ್ಲಿ ಮೆಗಾಡೈರಿ ನಿರ್ಮಿಸಲು ಚಿಂತನೆ ನಡೆಸಲಾಗುವುದು. ಅಲ್ಲದೇ ತಿಪಟೂರಿನಲ್ಲಿ 100 ಎಕರೆ ಭೂಮಿಯಲ್ಲಿ ತೋಟಗಾರಿಕಾ ಕಾಲೇಜನ್ನು ಆರಂಭ ಮಾಡತ್ತೇನೆಂದು  ಅವರು ಭರವಸೆ ನೀಡಿದರಲ್ಲದೇ ಜಿಲ್ಲೆಯ ಎಲ್ಲಾ ಕೆರೆಗಳಿಗೂ ನೀರು ತುಂಬಿಸುವುದು ನನ್ನ ಮೊದಲ ಆದ್ಯತೆ ಎಂದರು.

ಜಿಲ್ಲೆಯ 3 ತಾಲೂಕುಗಳು ಬರದ ಪಟ್ಟಿಯಿಂದ ಬಿಟ್ಟುಹೋಗಿದ್ದು, ಅದೇ ರೀತಿ ರಾಜ್ಯದಲ್ಲಿ ಬರದ ಪರಿಸ್ಥಿತಿಗೆ ಒಳಗಾದ ತಾಲೂಕುಗಳನ್ನು ಸೇರಿಸಿ ಬರಗಾಲ ಪೀಡಿತ ತಾಲೂಕುಗಳು ಎಂದು ಶೀಘ್ರದಲ್ಲಿ ಘೋಷಣೆ ಮಾಡಲಾಗುವುದು ಎಂದು ಅವರು ತಿಳಿಸಿದರು.ಕರ್ನಾಟಕದಲ್ಲಿ ಸಹಕಾರಿ ಕಾಯ್ದೆ ಜಾರಿಯಾದ ನಂತರ ಹಲವಾರು ತಿದ್ದುಪಡಿಗಳನ್ನು ಮಾಡಿ ಸಹಕಾರಿ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಅನುಕೂಲ ಮಾಡಿಕೊಡಲಾಗಿದೆ.

ರಾಜ್ಯದಲ್ಲಿ ಸುಮಾರು 44 ಸಾವಿರ ಸಹಕಾರಿ ಸಂಘಗಳಿವೆ. ಸರ್ಕಾರದಿಂದ 6.9 ಲಕ್ಷ ರೈತರಿಗೆ 249 ಕೋಟಿ ರೂ.ಗಳನ್ನು ಸಹಕಾರಿ ಬ್ಯಾಂಕ್‍ಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಸಾಲಮನ್ನಾ ಯೋಜನೆಯಡಿ ಸಹಕಾರಿ ಸಂಘದಲ್ಲಿ ಬೆಳೆ ಸಾಲಪಡೆದ ರೈತರಿಗೆ ಗರಿಷ್ಠ 1 ಲಕ್ಷದವರೆಗೆ ಸಾಲವನ್ನು ನೀಡಲಾಗುತ್ತಿದೆ. 2.85 ಲಕ್ಷ ರೈತರಿಗೆ 2000 ಕೋಟಿ ರೂ. ಬಿಡುಗಡೆ ಮಾಡಿದೆ. ನಗರದ ಪ್ರದೇಶದ ಬೀದಿ ಬದಿ ವ್ಯಾಪಾರಿಗಳಿಗೆ ಸಹಕಾರಿ ಸಂಘಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ ನೀಡಲಾಗುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ ಸಂಘಟನೆ ಎಂಬುದು ಬಹಳ ದೊಡ್ಡದಾದ ಸಹಕಾರಿ ಸಂಘ. ರಾಜ್ಯದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಮೊದಲ ಬಾರಿಗೆ ಪ್ರತಿ ಲೀಟರ್‍ಗೆ 2 ರೂ.ಗಳ ಪೋತ್ಸಾಹಧನ ನೀಡಿದರು. ಅದು ಇದೀಗ 5 ರೂ. ಆಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT