ಬೆಂಗಳೂರು ಟೆಕ್ ಸಮ್ಮಿಟ್ ಗೆ ಸಿಎಂ ಯಡಿಯೂರಪ್ಪ ಚಾಲನೆ 
ರಾಜ್ಯ

ರಾಜ್ಯದಲ್ಲಿ ತಂತ್ರಜ್ಞಾನ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಚಿಂತನೆ; ಯಡಿಯೂರಪ್ಪ

ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜ್ಞಾನದ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಕರ್ನಾಟಕ ತಂತ್ರಜ್ಞಾನ ಅಭಿವೃದ್ಧಿ ಮಂಡಳಿ (ಕೆಟಿಡಿಬಿ) ಸ್ಥಾಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬೆಂಗಳೂರು: ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜ್ಞಾನದ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಕರ್ನಾಟಕ ತಂತ್ರಜ್ಞಾನ ಅಭಿವೃದ್ಧಿ ಮಂಡಳಿ (ಕೆಟಿಡಿಬಿ) ಸ್ಥಾಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬೆಂಗಳೂರು ಅರಮನೆ ಆವರಣದಲ್ಲಿ ಸೋಮವಾರ ಆರಂಭಗೊಂಡ ಮೂರು ದಿನಗಳ ‘ಬೆಂಗಳೂರು ತಂತ್ರಜ್ಞಾನ ಶೃಂಗ –2019’ ಉದ್ಘಾಟಿಸಿ ಮಾತನಾಡಿದ ಅವರು, ಈ ಮಂಡಳಿ ತಂತ್ರಜ್ಞಾನ ವಲಯದ ಹೂಡಿಕೆಯ ಪ್ರೋತ್ಸಾಹ, ಉದ್ಯಮಗಳ ಅಭಿವೃದ್ಧಿ ಮತ್ತು ಮಾನವ ಶಕ್ತಿಯ ಅಭಿವೃದ್ಧಿಗೆ ಕಾರಣವಾಗಲಿದೆ ಮತ್ತು ಅತ್ಯುತ್ತಮ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಮುಂಚೂಣಿಯ ಹಬ್ ಗಳಲ್ಲಿ ರಾಜ್ಯಕ್ಕೆ ಸ್ಥಾನ ಒದಗಿಸಿಕೊಡಲಿದೆ ಎಂದು ಆಶಯ ವ್ಯಕ್ತಪಡಿಸಿದರು

೨೦೨೫ರ ವೇಳೆಗೆ ಬೆಂಗಳೂರು ಒಂದು ಟ್ರಿಲಿಯನ್ ಡಾಲರ್ ಡಿಜಿಟಲ್ ಆರ್ಥಿಕ ಶಕ್ತಿಯಾಗಿ ಬೆಳೆಯಬೇಕೆಂದು ಗುರಿ ಹಾಕಿಕೊಳ್ಲಲಾಗಿದೆ. ಸೇವಾ ವಲಯದಿಂದ ಉತ್ಪನ್ನಗಳ ಅಭಿವೃದ್ದಿ ಬದಲಾವಣೆಯಾಗುತ್ತಿದೆ. ವಿಜ್ಞಾನ ತಂತ್ರಜ್ಞಾನ ಕ್ಷೇತ್ರ ರಾಜ್ಯದ ಆರ್ಥಿಕ ಬೆಳವಣಿಗೆಗೆ ಉತ್ತಮ ಕೊಡುಗೆ ನೀಡುತ್ತಿದೆ. ಇತ್ತೀಚಿನ ಜಾಗತಿಕ ವರದಿಯ ಅನುಸಾರ ಬೆಂಗಳೂರು ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕವಾಗಿ ಹನ್ನೊಂದನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ತಂತ್ರಜ್ಞಾನದಲ್ಲಿ ಉದ್ಯಮಿಗಳು, ಕಾರ್ಪೋರೇಟ್ ಸಂಸ್ಥೆಗಳು, ಸ್ಟಾರ್ಟ್ ಅಪ್ ಗಳಿಗೆ ಸಹಕಾರ ನೀಡುವ ಸಲುವಾಗಿ ಸರ್ಕಾರ ಖಾಸಗಿ ಸಂಸ್ಥೆಗಳೊಡನೆ ಒಂದೇ ವೇದಿಕೆ ಸ್ಥಾಪನೆ ಮಾಡಲಿದೆ.ಆರ್ ಆಂಡ್ ಡಿ ಹಾಗೂ ಉದ್ಯ್ಮಗಳ ನಡುವೆ ಬಲಿಷ್ಟ ಸಹಭಾಗಿತ್ವಕ್ಕಾಗಿ ಜಗತ್ತಿನ ಪ್ರಮುಖ ಕಂಪನಿಗಳೊಡನೆ ಮೈತ್ರಿ ಮಾಡಿಕೊಳ್ಲಲಾಗುತ್ತದೆ. ಈ ಸಾಲಿನ ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಇಪ್ಪತ್ತೆರಡು ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದು ಇವರೆಲ್ಲರೂ ಮುಂದಿನ ದಿನಗಳಲ್ಲಿ ಹೂಡಿಕೆಗೆ ಸಹಕಾರ ನೀಡಲಿದ್ದಾರೆ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಸಾಫ್ಟ್ ವೇರ್ ಟೆಕ್ಲಾಲಜಿ ಪಾರ್ಕ್ ಆಫ್ ಇಂಡಿಯಾ ವತಿಯಿಂದ ಸಮ್ಮೇಳನ ಆಯೋಜಿಸಲಾಗಿದೆ.ಇದು ಜಾಗತಿಕ ವೇದಿಕೆಯಾಗಿದ್ದು ಜಾಗತಿಕ ಮಟ್ಟದಲ್ಲಿ ಬಂಡವಾಳ ಹೂಡಿಕೆಗೆ ಆಹ್ವಾನ ನೀಡಲಾಗಿದ್ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮೂರು ದಿನಗಳ ಸಮ್ಮೇಳನದಲ್ಲಿ ನಾನಾ ದೇಶಗಳ ೩೫೦೦ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ೨೦೦ ಉಪನ್ಯಾಸಕರು, ೩೬ ಚರ್ಚಾಗೋಷ್ಟಿಗಳು ನಡೆಯಲಿದ್ದು ಮಹತ್ವದ ವಿಚಾರಗಳು ಮಂಡನೆಯಾಗಲಿದೆ.

ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ಮಾರಾಯಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿ.ಎಂ. ವಿಜಯ ಭಾಸ್ಕರ್, ಬ್ರಿಟೀಷ್ ಹೈಕಮಿಷನರ್ ಸರ್ ಡೊಮಿನಿಕ್ ಅಂಥೋನಿ ಬಿರಾರ್ಡ್ ಸೇರಿ ರಾಜ್ಯ, ರಾಶ್ಃತ, ಅಂತರಾಷ್ಟ್ರೀಯ ಮಟ್ಟದ ಸಿಇಒಗಳೂ ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT