ಸಾಂದರ್ಭಿಕ ಚಿತ್ರ 
ರಾಜ್ಯ

ಪುತ್ತೂರಿನಲ್ಲಿ ಜೋಡಿ ಕೊಲೆ, ಅಜ್ಜ, ಮೊಮ್ಮಗಳ ಸಾವು: ಮಹಿಳೆಗೆ ಗಂಭೀರ ಗಾಯ

ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕ ಬಳಿಯ ಕುರಿಯದ ಹೊಸಮಾರು ಎಂಬಲ್ಲಿ ಜೋಡಿ ಕೊಲೆ ನಡೆದಿದೆ. ಕುರಿಯ ನಿವಾಸಿ ಕೊಗ್ಗು ಸಾಹೇಬ್ (65) ಮತ್ತು ಅವರ ಮೊಮ್ಮಗಳು 9ನೇ ತರಗತಿ ವಿದ್ಯಾರ್ಥಿನಿ ಸಮೀಹಾ ಬಾನು ಕೊಲೆಯಾದವರು

ಮಂಗಳೂರು: ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕ ಬಳಿಯ ಕುರಿಯದ ಹೊಸಮಾರು ಎಂಬಲ್ಲಿ ಜೋಡಿ ಕೊಲೆ ನಡೆದಿದೆ.

ಕುರಿಯ ನಿವಾಸಿ ಕೊಗ್ಗು ಸಾಹೇಬ್ (65) ಮತ್ತು ಅವರ ಮೊಮ್ಮಗಳು 9ನೇ ತರಗತಿ ವಿದ್ಯಾರ್ಥಿನಿ ಸಮೀಹಾ ಬಾನು ಕೊಲೆಯಾದವರು. ಕೊಗ್ಗು ಸಾಹೇಬ್ ಅವರ ಪತ್ನಿ ಖದೀಜಾಬಿ ಬಿ. ಎಂಬವರು ಗಂಭೀರ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರು ಒಂದೆ ಮನೆಯಲ್ಲಿ ವಾಸವಿದ್ದರು,ಕುಗ್ಗು ಸಾಹೇಬ್ ಅವರ ಪತ್ನಿ ಖತೀಜಮ್ಮ ( 55 ) ಅವರ ಮೇಲೂ ಮಾರಣಾಂತಿಕ ಹಲ್ಲೆಯಾಗಿದ್ದು, ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮನೆಯಲ್ಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಮೂವರೇ ವಾಸವಾಗಿದ್ದು, ಗಂಡುಮಕ್ಕಳು ಹೊರದೇಶದಲ್ಲಿದ್ಧಾರೆ. ರಾತ್ರಿ ಮಲಗಿದ್ದ ಸಮಯದಲ್ಲಿ ಈ ಕೃತ್ಯ ನಡೆಸಿದ್ದಾರೆ. ಈ ಸಂಬಂಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್