ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಮುಸ್ಲಿಮರ ಫೋಟೋ ಹಾಕದ್ದಕ್ಕೆ ಕೈ-ಕೈ ಮಿಲಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಆಗಮನದ ಬೆನ್ನಲ್ಲೇ ಚಿಕ್ಕಮಗಳೂರಿನ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದೆ.

ಚಿಕ್ಕಮಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಆಗಮನದ ಬೆನ್ನಲ್ಲೇ ಚಿಕ್ಕಮಗಳೂರಿನ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದೆ. ಕೊರಳಪಟ್ಟಿ ಹಿಡಿದು ಕಾಂಗ್ರೆಸ್ ಮುಖಂಡರು ಒಬ್ಬರನ್ನೊಬ್ಬರು ತಳ್ಳಾಡಿಕೊಂಡಿದ್ದಾರೆ.

ಬ್ಯಾನರ್ ನಲ್ಲಿ ಮುಸ್ಲಿಂ ಮುಖಂಡರ ಫೋಟೋ ಹಾಕದ ವಿಷಯಕ್ಕೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಕೊರಳಪಟ್ಟಿ ಹೊಡೆದಾಡಿದ ಘಟನೆ ಮಂಗಳವಾರ ವರದಿಯಾಗಿದೆ.

ನಗರದ ಹನುಮಂತಪ್ಪ ಸರ್ಕಲ್ನಲ್ಲಿ ಈ ಘಟನೆ ನಡೆದಿದ್ದು, ಬ್ಯಾನರ್‌ನಲ್ಲಿ ಮುಸ್ಲಿಂ ಮುಖಂಡರ ಫೋಟೋ ಹಾಕದಿದ್ದಕ್ಕೆ , ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಆಕ್ರೋಶಗೊಂಡಿದ್ದಾರೆ. ಕಾಂಗ್ರೆಸ್ ಮುಖಂಡ ರಾಹಿಲ್ ಅಕ್ಮಲ್ ಅಸಮಾಧಾನ ಹೊರಹಾಕಿದ್ದು, ನಡುರಸ್ತೆಯಲ್ಲೇ ಕೊರಳಪಟ್ಟಿ ಹಿಡಿದು ಜಗಳವಾಡಿದ್ದಾರೆ.

ಮುಸ್ಲಿಮರ ವೋಟ್ ಬೇಕು ಮುಸ್ಲಿಂ ಮುಖಂಡರ ಫೋಟೋ ಬೇಡ ಎಂದು ರಾಹಿಲ್ ಅಸಮಾಧಾನ ಹೊರಹಾಕಿದ್ದು, ನಡುರಸ್ತೆಯಲ್ಲೇ ಜಗಳಕ್ಕೆ ಬಿದ್ದಿದ್ದಾರೆ. ಈ ಕಾರಣಕ್ಕೆ ಹನುಮಂತಪ್ಪ ಸರ್ಕಲ್‌ನಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಬಿಗಿಪಟ್ಟು..!

ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ