ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಯುವತಿ ನಗ್ನಗೊಳಿಸಿ ದರೋಡೆ!

ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಆಕೆಯನ್ನು ವಿವಸ್ತ್ರಗೊಳಿಸಿ ಚಿನ್ನ ಕದ್ದು ಪರಾರಿಯಾಗಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಆಕೆಯನ್ನು ವಿವಸ್ತ್ರಗೊಳಿಸಿ ಚಿನ್ನ ಕದ್ದು ಪರಾರಿಯಾಗಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಪ್ರಕರಣ ಸಂಬಂಧ ಸಂತ್ರಸ್ತೆಯ ತಾಯಿ ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. 

ಯುವತಿಯ ತಂದೆ ಹಲವು ವರ್ಷಗಳ ಹಿಂದೆಯೇ ಮೃತಪಟ್ಟಿದ್ದು, ತಾಯಿ ಮತ್ತು ತಮ್ಮನ ಜೊತೆಗೆ ಪೀಣ್ಯದ ಎಂ.ಇ.ಕಾಲೋನಿಯಲ್ಲಿ ನೆಲೆಸಿದ್ದಾರೆ. 

ವಿದ್ಯಾರ್ಥಿನಿ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಾಳೆ. ಯುವತಿಯ ತಾಯಿ ಟೈಲರಿಂಗ್ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಯುವತಿ ತಾಯಿ ಇತ್ತೀಚೆಗೆ ಪುತ್ರನ ಶಾಲೆ ಬಳಿ ವಿಚಾರಣೆಗೆಂದು ತೆರಳಿದ್ದರು. ಈ ವೇಳೆ ಯುವತಿಯೊಬ್ಬಳೆ ಮನೆಯಲ್ಲಿದ್ದಳು. ಬಾಗಿಲು ತೆರೆದು ಕಸಗೂಡಿಸುತ್ತಿದ್ದ ವೇಲೆ ಇಬ್ಬರು ದುಷ್ಕರ್ಮಿಗಳು ಮನೆಗೆ ನುಗ್ಗಿದ್ದಾರೆ. ಬಳಿಕ ಆಕೆಯ ಬಾಯಿ ಮುಚ್ಚಿ ರೂಮ್ ಒಳಗೆ ಎಳೆದೊಯ್ದಿದ್ದಾರೆ. 

ನಂತರ ಆಕೆಯನ್ನು ವಿವಸ್ತ್ರಗೊಳಿಸಿ ಮನೆಯಲ್ಲಿದ್ದ ಟಿವಿ ಹಾಗೂ ಶೋಕೇಶ್ ಒಡೆದು ಹಾಕಿದ್ದಾರೆ. 

ಯುವತಿಯನ್ನು ವಿವಸ್ತ್ರಗೊಳಿಸಿದ ದುಷ್ಕರ್ಮಿಗಳು ಆಕೆಯ ಕುತ್ತಿಗೆಯಲ್ಲಿದ್ದ 20 ಗ್ರಾಂ ತೂಕದ ಚಿನ್ನ ಸರ, ಬೆಳ್ಳಿ ಉಂಗುರ ಹಾಗೂ ಕಾಲ್ಗೆಜ್ಜೆ ಕಸಿದುಕೊಂಡು, ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಯುವತಿಯ ತಾಯಿ ದೂರಿನಲ್ಲಿ ವಿವರಿಸಿದ್ದಾರೆ. 

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆ ಸಂಬಂಧ ಯುವತಿಯನ್ನು ಪ್ರಶ್ನಿಸಿದ್ದಾರೆ. ಯುವಂತಿ ಗೊಂದಲದ ಹೇಳಿಕೆ ನೀಡುತ್ತಿದ್ದಾಳೆ. ಮನೆಯಲ್ಲಿ ಯಾರಾದರೂ ಭೇಟಿ ನೀಡಿದ್ದಾರೆಂಯೇ ಎಂಬುದನ್ನು ಪರಿಶೀಲಿಸಲು ಸಂತ್ರಸ್ತೆ ಮನೆ ಬಳಿ ಯಾವುದೇ ಸಿಸಿಟಿವಿಗಳಿಲ್ಲ. ತನಿಖೆ ಮುಂದುವರೆದಿದೆ ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT