ಬಂಡೀಪುರ: ಬ್ರಿಡ್ಜ್ನಿಂದ ಕೆಳಗುರುಳಿದ ಲಾರಿ, ಇಬ್ಬರು ಬೈಕ್ ಸವಾರರು ಸೇರಿ ಮೂವರು ಸಾವು
ಪ್ಲೈವುಡ್ ಶೀಟ್ಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಬ್ರಿಡ್ಜ್ ಮೇಲಿಂದ ಕೆಳಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಪರಿಣಾಮ ಲಾರಿ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಾಮರಾಜನಗರ: ಪ್ಲೈವುಡ್ ಶೀಟ್ಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಬ್ರಿಡ್ಜ್ ಮೇಲಿಂದ ಕೆಳಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಪರಿಣಾಮ ಲಾರಿ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಾದ ಶಿವಪುರದ ಶಿವಪ್ಪ, ಕಾಳಪ್ಪ ಹಾಗೂ ಲಾರಿ ಚಾಲಕ ಈಶ್ಚರಪ್ಪ ಮೃತಪಟ್ಟ ದುರ್ದೈವಿಗಳು.
ಫ್ಲೈವುಡ್ ಶೀಟ್ಗಳನ್ನು ಕೊಂಡೊಯ್ಯುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ ಈ ಅವಘಡ ಸಂಭವಿಸಿದೆ. ಲಾರಿ ಬ್ರಿಡ್ಜ್ ಕೆಳಗೆ ಬಿದ್ದು ನಜ್ಜುಗುಜ್ಜಾಗಿದ್ದು, ಚಾಲಕನ ದೇಹವನ್ನು ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಸ್ಥಳಕ್ಕೆ ಎಸ್ಪಿ, ಡಿವೈಎಸ್ಪಿ ಭೇಟಿ ನೀಡಿದ್ದು ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-ಗೂಳಿಪುರ ನಂದೀಶ ಎಂ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.