ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ವ್ಯಕ್ತಿ ಬಲಿ ಪಡೆದ ನಕಲಿ ವೈದ್ಯ!

ಯಕಶ್ಚಿತ್ ಜ್ವರಕ್ಕೆ ನಕಲಿ ವೈದ್ಯ ನೀಡಿದ ಇಂಜೆಕ್ಷನ್ ನಿಂದಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ದಡಮಹಳ್ಳಿಯಲ್ಲಿ ನಡೆದಿದೆ.

ಮಂಡ್ಯ: ಯಕಶ್ಚಿತ್ ಜ್ವರಕ್ಕೆ ನಕಲಿ ವೈದ್ಯ ನೀಡಿದ ಇಂಜೆಕ್ಷನ್ ನಿಂದಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ದಡಮಹಳ್ಳಿಯಲ್ಲಿ ನಡೆದಿದೆ.

ಮೃತ ವ್ಯಕ್ತಿ ಮಳವಳ್ಳಿ ತಾಲೂಕಿನ ದಡಮಹಳ್ಳಿಯ ಶಿವಲಿಂಗೇಗೌಡ(58) ಎಂದು ಗುರುತಿಸಲಾಗಿದ್ದು,  ಆರ್ ಎಂಪಿ ವೈದ್ಯ ಕೃಷ್ಣಮೂರ್ತಿಯಿಂದ ಪಡೆದ ಇಂಜೆಕ್ಷನ್ ನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮಂಗಳೂರು ಮೂಲದ ಕೃಷ್ಣಮೂರ್ತಿ ಅವರು ಕಳೆದ 20 ವರ್ಷಗಳಿಂದ ತೊರೆಕಾಡನಹಳ್ಳಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಶಿವಲಿಂಗೇಗೌಡ ಅವರು ಸೋಮವಾರ ಕೃಷ್ಣಮೂರ್ತಿ ಕ್ಲಿನಿಕ್ ಗೆ ತೆರಳ ಇಂಜೆಕ್ಷನ್ ಪಡೆದಿದ್ದರು. ಇಂಜೆಕ್ಷನ್ ಪಡೆದ ಬಳಿಕ ಅವರ ಸೊಂಟದಲ್ಲಿ ಊತ ಕಾಣಿಸಿಕೊಂಡಿತ್ತು. ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. 

ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ