ತನ್ವೀರ್ ಸೇಠ್ 
ರಾಜ್ಯ

ತನ್ವೀರ್ ಸೇಠ್ ಹಲ್ಲೆ ಪ್ರಕರಣ: ದಾಳಿಕೋರ ತರಬೇತಿ ಪಡೆದಿದ್ದ- ಪೊಲೀಸರು

ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ದಾಳಿಕೋರ ತರಬೇತಿ ಪಡೆದುಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ. 

ಬೆಂಗಳೂರು: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ದಾಳಿಕೋರ ತರಬೇತಿ ಪಡೆದುಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ. 

ದಾಳಿ ನಡೆದ ಘಟನೆಯ ವಿಡಿಯೋವನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ದಾಳಿ ನಡೆಸಿರುವ ವಿಧಾನವನ್ನು ಪೊಲೀಸರು ಸೂಕ್ಷ್ಮವಾಗಿ ಗಮನಿಸಿದ್ದು, ಈ ವೇಳೆ ದಾಳಿಕೋರ ತರಬೇತಿಕೊಂಡಿದ್ದಾನೆಂದು ತಿಳಿಸಿದ್ದಾರೆ. 

ಬನ್ನಿಮಂಟಪ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಆರತಕ್ಷತೆ ವೇಳೆ ತನ್ವೀರ್ ಸೇಠ್ ಅವರು ಆಸೀನರಾಗಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಆರೋಪಿ ಫರ್ಹಾನ್ ಪಾಷಾ, ದಾಳಿಗೂ ಮುನ್ನ ಸ್ನೇಹಿತನೊಂದಿಗೆ ಮಾತನಾಡುತ್ತಿದ್ದ. ಈ ಹಿಂದೆ ಕೂಡ ನಾಲ್ಕು ಬಾರಿ ತನ್ವೀರ್ ಸೇಠ್ ಅವರನ್ನು ಹತ್ಯೆ ಮಾಡಲು ಯತ್ನ ನಡೆಸಿದ್ದ ಎಂದು ಹೇಳಲಾಗುತ್ತಿದೆ. 

ತನಿಖೆ ವೇಳೆ ದಾಳಿಗೆ ನಾನೇ ಜವಾಬ್ದಾರಿ ಎಂದು ಫರ್ಹಾನ್ ಹೇಳಿಕೊಂಡಿದ್ದು, ಇತರರ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾನೆ. ಇದೀಗ ಪೊಲೀಸರು ಫರ್ಹಾನ್ ಜೊತೆಗಿದ್ದ ಸ್ನೇಹಿತರು, ಇತರರನ್ನು ತನಿಖೆಗೊಳಪಡಿಸಿದ್ದಾರೆ. ಇನ್ನೂ ಕೆಲವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಈ ನಡುವೆ ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಅವರು ತನ್ವೀರ್ ಸೇಠ್ ಅವರಿಗೆ ನೀಡಲಾಗುತ್ತಿದ್ದ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಪ್ರತೀ ಪಾಳಿಯಲ್ಲೂ ಮೂವರು ಗನ್ ಮ್ಯಾನ್ ಗಳನ್ನು ನಿಯೋಜಿಸಿದ್ದಾರೆ. ಈ ಹಿಂದೆ ತನ್ವೀರ್ ಸೇಠ್ ಅವರಿಗೆ ಭದ್ರತೆ ನೀಡುತ್ತಿದ್ದ ಗನ್ ಮ್ಯಾನ್ ಫಿರೋಜ್ ಖಾನ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. 

ಘಟನೆ ಕುರಿತಂತೆ ಮಾತನಾಡಿರುವ ಮಾಜಿ ಸಚಿವ ಯು.ಟಿ.ಖಾದರ್ ಅವರು, ದಾಳಿಯಲ್ಲಿ ಎಸ್'ಡಿಪಿಐ ಕೈವಾಡವಿರುವುದು ಸಾಬೀತಾಗಿದ್ದೇ ಆದರೆ, ಸರ್ಕಾರ ಆ ಸಂಘಟನೆಯನ್ನು ನಿಷೇಧಿಸಬೇಕು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ