ಯು.ಟಿ ಖಾದರ್ 
ರಾಜ್ಯ

ಶಾಸಕ ಯು.ಟಿ.ಖಾದರ್ ಅವರಿಗೆ ಗನ್‌ ಮ್ಯಾನ್ ಭದ್ರತೆ

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಬೆನ್ನಲ್ಲೇ ಮತ್ತೋರ್ವ ಮುಸ್ಲಿಂ ಸಮುದಾಯದ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರಿಗೆ ಮಂಗಳೂರು ನಗರ ಪೊಲೀಸರು ಗನ್‌ ಮ್ಯಾನ್‌ ಒಬ್ಬರನ್ನು ಭದ್ರತೆಗೆ ನಿಯೋಜಿಸಿದ್ದಾರೆ.

ಮಂಗಳೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಬೆನ್ನಲ್ಲೇ ಮತ್ತೋರ್ವ ಮುಸ್ಲಿಂ ಸಮುದಾಯದ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರಿಗೆ ಮಂಗಳೂರು ನಗರ ಪೊಲೀಸರು ಗನ್‌ ಮ್ಯಾನ್‌ ಒಬ್ಬರನ್ನು ಭದ್ರತೆಗೆ ನಿಯೋಜಿಸಿದ್ದಾರೆ.

ಮಾಜಿ ಸಚಿವ ಯು. ಟಿ. ಖಾದರ್ ಅವರಿಗೆ ಗನ್ ಮ್ಯಾನ್ ಭದ್ರತೆ ಒದಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಖಾದರ್ ಪ್ರಸ್ತುತ ಹುಣಸೂರು ವಿಧಾನಸಭೆಯ ಉಪಚುನಾವಣೆಯ ಪ್ರಚಾರದಲ್ಲಿ ನಿರತರಾಗಿದ್ದು, ಭದ್ರತೆಯನ್ನು ಅಲ್ಲಿಂದಲೇ ಒದಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹತ್ಯೆ ಯತ್ನ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಪ್ರಕರಣ ಕುರಿತಾದ ಪೊಲೀಸ್ ತನಿಖೆಯಲ್ಲಿ ಅಘಾತಕಾರಿ ಮಾಹಿತಿ ಬಯಲಾಗಿದ್ದು ಮಾಜಿ ಸಚಿವ ಯು.ಟಿ ಖಾದರ್‌ ಮತೀಯ ಸಂಘಟನೆಯೊಂದರ 'ಹಿಟ್ ಲಿಸ್ಟ್' ನಲ್ಲಿದ್ದಾರೆ  ಎಂಬ ವಿಚಾರ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಖಾದರ್ ಅವರಿಗೆ ಮಂಗಳೂರು ಪೊಲೀಸರು ಭದ್ರತೆ ನೀಡಿದ್ದಾರೆ. ಭದ್ರತೆಗಾಗಿ ಓರ್ವ ಗನ್ ಮೆನ್‌ನನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT