ರಾಜ್ಯ

ಫೆಬ್ರವರಿಯಲ್ಲಿ ಕಲಬುರಗಿ ಜಯದೇವ ಹೃದ್ರೋಗ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ: ಡಾ.ಸಿ.ಎನ್.ಮಂಜುನಾಥ್

Lingaraj Badiger

ಕಲಬುರಗಿ: ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ಕಲಬುರಗಿ ಆಸ್ಪತ್ರೆಯಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸ್ಥಳವಕಾಶದ ಸಮಸ್ಯೆ ಕಾಡುತ್ತಿದ್ದು, ಕಲಬುರಗಿ ನಗರದ ಹೃದಯ ಭಾಗದಲ್ಲಿರುವ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ೩೦೦ ಹಾಸಿಗೆವುಳ್ಳ ಸುಸಜ್ಜಿತ ಆಸ್ಪತ್ರೆಯ ಕಟ್ಟಡ ನಿರ್ಮಾಣಕ್ಕೆ ಬರುವ ಫೆಬ್ರವರಿಯಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಹೇಳಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ೧೫೦ ಕೋಟಿ ರೂ. ಅನುದಾನದಲ್ಲಿ ಕಟ್ಟಡ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಕಟ್ಟಡ ಪೂರ್ಣಗೊಳ್ಳಲಿದೆ. ಆಸ್ಪತ್ರೆಗೆ ಬೇಕಾಗುವ ಉಪಕರಣಗಳು ಸೇರಿದಂತೆ ಇನ್ನಿತರ ವೆಚ್ಚಕ್ಕೆ ಸಂಸ್ಥೆಯ ಆಂತರಿಕ ಸಂಪನ್ಮೂಲವನ್ನು ಬಳಸಿಕೊಳ್ಳಲಾಗುವುದು ಎಂದರು.

ಜಯದೇವ ಸಂಸ್ಥೆಯ ಬಗ್ಗೆ ಇತ್ತೀಚೆಗೆ ಯೂರೋಪಿನ್ ಹಾರ್ಟ್ ಜರ್ನಲ್‌ನಲ್ಲಿ "ಕಾರ್ಡಿಯಕ್ ಸೆಂಟರ್ ಫಾರ್ ಎಕ್ಸಿಲೆನ್ಸಿ" ಲೇಖನ ಪ್ರಕಟವಾಗಿದೆ. ಇದು ದೇಶದ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿಯೆ ಇದೇ ಪ್ರಥಮ ಬಾರಿಗೆ ಇಂತಹ ಲೇಖನ ಬರೆದಿದ್ದು, ಜಾಗತಿಕವಾಗಿ ಜಯದೇವ ಸಂಸ್ಥೆಗೆ ಮತ್ತಷ್ಟು ಮನ್ನಣೆ ದೊರೆತಿದೆ. ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ. ಸಂಸ್ಥೆಯ ಕಾರ್ಯವೈಖರಿ ವೀಕ್ಷಿಸಲು ಅಮೇರಿಕ, ಇಟಲಿ, ಐರೋಪ್ಯ ಒಕ್ಕುಟ, ವಿಯಟ್ನಾಮ್ ದೇಶದ ವೈದ್ಯರು ಇಲ್ಲಿಗೆ ಬರುತ್ತಿದ್ದಾರೆ ಎಂದರು.

SCROLL FOR NEXT