ಉಪಚುನಾವಣೆ: ಐಶರಾಮಿ ಬೈಕ್ನಲ್ಲಿ ಆನಂದ್ ಸಿಂಗ್ ರೋಡ್ ಶೋ...
ಹೊಸಪೇಟೆ ಉಪಚುನಾವಣೆ ಪ್ರಚಾರ ಬಿರುಸಿನಿಂದ ಸಾಗಿದೆ. ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದು, ಅಭ್ಯರ್ಥಿಗಳು ಹೆಚ್ಚಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ರೋಡ್ ಶೋ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ಹೊಸಪೇಟೆ: ಹೊಸಪೇಟೆ ಉಪಚುನಾವಣೆ ಪ್ರಚಾರ ಬಿರುಸಿನಿಂದ ಸಾಗಿದೆ. ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದು, ಅಭ್ಯರ್ಥಿಗಳು ಹೆಚ್ಚಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ರೋಡ್ ಶೋ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ಆನಂದ್ ಸಿಂಗ್ ರೋಡ್ ಶೋ ನಲ್ಲಿ ಅಂಥದ್ದೇನಿತ್ತು ಎನ್ನುತ್ತೀರಾ? ಈ ವರದಿ ನೋಡಿ.... ನ.30 ರಂದು ಆನಂದ್ ಸಿಂಗ್ ಬರೊಬ್ಬರಿ 18 ಲಕ್ಷ ಮೌಲ್ಯದ ಹಾರ್ಲೆ ಡೆವಿಡ್ಸನ್ ಬೈಕ್ ಹತ್ತಿ ಅಬ್ಬರದ ಪ್ರಚಾರ ನಡೆಸಿದರು. ಸುಮಾರು ಮೂರು ನೂರಕ್ಕೂ ಹೆಚ್ಚು ಬೈಕ್ ಗಳು ರ್ಯಾಲಿಯಲ್ಲಿ ಬಾಗಿಯಾಗಿದ್ದವು.
ಹೊಸಪೇಟೆ ಹೊರ ವಲಯದ ಬಳ್ಳಾರಿ ರಸ್ತೆಯಲ್ಲಿರುವ ರೈಸ್ ಮಿಲ್ ನಿಂದ ಪ್ರಾರಂಭವಾದ ಬೈಕ್ ರ್ಯಾಲಿ ನಗರದ ಪ್ರತಿಯೊಂದು ಪ್ರಮುಖ ರಸ್ತೆಯಲ್ಲಿ ಸಂಚರಿಸಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.