ಸುಳ್ಯ ಬಳಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರ ದುರ್ಮರಣ
ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ದಾರುಣ ಸಾವನ್ನಪ್ಪಿದ್ದಾರೆ.
ಸುಳ್ಯ: ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ದಾರುಣ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಂಪಾಜೆ ಸಮೀಪದ ಮೊಣ್ಣಂಗೇರಿ ನಿವಾಸಿಗಳಾದ ಅಚ್ಚಯ್ಯ ಹಾಜಿ ಹಾಗೂ ಅವರ ಮಕ್ಕಳಾದ ಇಬ್ರಾಹಿಂ, ಹ್ಯಾರಿಸ್ ಮತ್ತು ಉಮ್ಮರ್ ಮೃತಪಟ್ಟಿದ್ದಾರೆ.
ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.