ರಾಜ್ಯ

ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಸಿಎಂ ಭೇಟಿಯಾದ ಕಾಂಗ್ರೆಸ್ ಮುಖಂಡರು

Manjula VN

ಬೆಂಗಳೂರು: ನಗರಾಭಿವೃದ್ಧಿ ಕಾರ್ಯಗಳ ಅನುದಾನ ಹಂಚಿಕೆಯಲ್ಲಿ ಕಾಂಗ್ರೆಸ್ ಕ್ಷೇತ್ರಗಳಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ. ಈ ತಾರತಮ್ಯವನ್ನು ಬಗೆಹರಿಸಿ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಕೋರಿ ಕಾಂಗ್ರೆಸ್ ಮುಖಂಡರು ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮನವಿ ಸಲ್ಲಿಸಿದರು. 

ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಶಾಸಕ ನಿಯೋಗವು, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ರೂ.8 ಸಾವಿರ ಕೋಟಿ ಮೀಸಲಿಟ್ಟಿತ್ತು. ಆದರೆ, ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕಾಂಗ್ರೆಸ್ ಕ್ಷೇತ್ರಗಳ ಯೋಜನೆಯನ್ನು ತಡೆಹಿಡಯಲಾಗಿದೆ. ಜೊತೆಗೆ ಅನುದಾನವನ್ನೂ ಕಡಿತಗೊಳಿಸಲಾಗಿದೆ. 

ಇದರಿಂದ ಬೆಂಗಳೂರು ಸರ್ವಾಂಗೀಣ ಅಭಿವೃದ್ಧಿಗೆ ಅಡ್ಡಿಯುಂಟಾಗಲಿದೆ ಎಂದು ಅಸಮಾಧಆನ ತೋಡಿಕೊಡಿದ್ದಾರೆಂದು ತಿಳಿದುಬಂದಿದೆ. 

SCROLL FOR NEXT