ರಾಜ್ಯ

ಸರ್ಕಾರಿ ನೌಕರರ ವಿರುದ್ಧದ ಅನಾಮಧೇಯ ದೂರು ಪರಿಗಣಿಸದಂತೆ ರಾಜ್ಯ ಸರ್ಕಾರ ಆದೇಶ

Lingaraj Badiger

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ಸಿಬ್ಬಂದಿ ವಿರುದ್ಧ ಅನಾಮಧೇಯ ದೂರುಗಳನ್ನು ತನಿಖೆಗೆ ಮಾನ್ಯ ಮಾಡದೇ, ಪೂರ್ಣವಿಳಾಸ ಸಮರ್ಪಕ ದಾಖಲೆ ಇರುವ ದೂರುಗಳನ್ನು ಮಾತ್ರ ಪರಿಗಣಿಸಬೇಕೆಂದು ರಾಜ್ಯ ಸರ್ಕಾರದ  ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಅನಾಮಧೇಯ ದೂರುಗಳನ್ನು ಪರಿಗಣಿಸದಂತೆ ಸೆಪ್ಟೆಂಬರ್ ಮಾಹೆಯಲ್ಲಿ‌ ರಾಜ್ಯ ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಸರ್ಕಾರ ಈ ಸಂಬಂಧ ಸುತ್ತೋಲೆ ಹೊರಡಿಸಿದೆ.

ಅನಾಮಧೇಯ ದೂರುಗಳು ಕೆಲವು ಸಂದರ್ಭಗಳಲ್ಲಿ ದ್ವೇಷ, ಅಸೂಯೆ ಹಾಗೂ ಪೂರ್ವಾಗ್ರಹಪೀಡಿತವಾಗಿರುತ್ತವೆ. ಅಲ್ಲದೇ ದೂರುಗಳಿಗೆ ಸಂಬಂಧಿಸಿದ ಸಮರ್ಪಕ ದಾಖಲೆಗಳನ್ನು ಒದಗಿಸಿರುವುದಿಲ್ಲ. ಇಂತಹ ದೂರುಗಳಿಂದಾಗಿ ಸರ್ಕಾರಿ‌ ನೌಕರರ ದೈನಂದಿನ ಕೆಲಸ‌ಕಾರ್ಯಗಳಲ್ಲಿ ಹಸ್ತಕ್ಷೇಪವುಂಟಾಗುತ್ತದೆ.‌ ಹಾಗೂ ದಕ್ಷ ಹಾಗೂ ಪ್ರಾಮಾಣಿಕ ನೌಕರರ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತದೆ. ಹೀಗಾಗಿ ಅವರು ಮುಕ್ತ‌ ಮತ್ತು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ವಿಜಯ್ ಭಾಸ್ಕರ್ ಸೂಚಿಸಿದ್ದಾರೆ.

SCROLL FOR NEXT