ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಡ್ರಾಪ್‌ ಕೊಡುವುದಾಗಿ ನಂಬಿಸಿ ದರೋಡೆ, 3 ಆರೋಪಿಗಳ ಬಂಧನ

 ಬಸ್‌ಗಾಗಿ ಕಾಯುತ್ತಿದ್ದವರಿಗೆ ಡ್ರಾಪ್ ಕೊಡುವುದಾಗಿ ನಂಬಿಸಿ ಕಾರಿಗೆ ಹತ್ತಿಸಿಕೊಂಡು ಚಾಕು, ನಕಲಿ ಗನ್ ತೋರಿಸಿ ಬೆದರಿಸಿ ನಗದು ಚಿನ್ನಾಭರಣಗಳನ್ನು ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ರಾಮನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಬಸ್‌ಗಾಗಿ ಕಾಯುತ್ತಿದ್ದವರಿಗೆ ಡ್ರಾಪ್ ಕೊಡುವುದಾಗಿ ನಂಬಿಸಿ ಕಾರಿಗೆ ಹತ್ತಿಸಿಕೊಂಡು ಚಾಕು, ನಕಲಿ ಗನ್ ತೋರಿಸಿ ಬೆದರಿಸಿ ನಗದು ಚಿನ್ನಾಭರಣಗಳನ್ನು ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ರಾಮನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬ್ಯಾಟರಾಯನಪುರದ ಖದೀಮರಾದ ಸಲೀಂ ಪಾಷ, ಅಬ್ದುಲ್ ಸುಲೆಮಾನ್ ಮತ್ತು ರಾಜೇಶ್ ರಾಯ್‌ ಬಂಧಿತ ಆರೋಪಿಗಳು. ಅವರಿಂದ ಕೃತ್ಯಕ್ಕೆ ಬಳಸಿದ್ದ ಇಂಡಿಕಾ ಫಿಸ್ಟ್ ಕಾರು, ಚಾಕು, ನಕಲಿ ಗನ್, ಫೋನ್ ಮತ್ತು 14,600 ರೂ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ ತಿಳಿಸಿದ್ದಾರೆ.

ಬಂಧಿತ ಆರೋಪಿಗಳು ಬೆಂಗಳೂರು ನಗರದ ಸಿದ್ದಾಪುರ, ಜಯನಗರ ಮತ್ತು ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.

ನಿನ್ನೆ ಮುಂಜಾನೆ ಕೆ.ಆರ್. ಪುರಂ ಸಮೀಪ ನಾಗರಾಜ್ ಅವರಿಗೆ ಡ್ರಾಪ್ ಕೊಡುವುದಾಗಿ ನಂಬಿಸಿ ಕಾರಿನಲ್ಲಿ ಅಪಹರಿಸಿದ್ದಾರೆ. ಬಿಡದಿಯ ಬೈರಮಂಗಲ ಚೆಕ್ ಪೋಸ್ಟ್ ಬಳಿ ಪೋಲೀಸರನ್ನು ಕಂಡ ನಾಗರಾಜ್ ಸಹಾಯಕ್ಕೆ ಕೂಗಿದ್ದಾರೆ. ಆಗ ಕರ್ತವ್ಯದಲ್ಲಿದ್ದ ಪೋಲೀಸರು ಕಾರನ್ನು ಬೆನ್ನಟ್ಟಿ ಸಿನಿಮೀಯ ರಿತಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಬಿಡದಿ ಹಾಗೂ ಸಂಪಿಗೆನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ರಾಮನಗರ ಜಿಲ್ಲಾ ಪೋಲೀಸ್ ವರಿಷ್ಟರು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ನಮ್ಮ ರಾಜ್ಯಕ್ಕೆ 44 ಸಾವಿರ ವಾಣಿಜ್ಯ ಸಿಲಿಂಡರ್ ಅವಶ್ಯಕತೆಯಿದೆ, ಪೂರೈಕೆಯಾಗುತ್ತಿರುವುದು ಕೇವಲ 9 ಸಾವಿರ: ಸಚಿವ ಕೆ ಹೆಚ್ ಮುನಿಯಪ್ಪ

ಯುಗಾದಿ, ರಂಜಾನ್ ರಜೆ: ಬೆಂಗಳೂರಿನಿಂದ ವಿವಿಧೆಡೆ ಸಂಚಾರಕ್ಕೆ ವಿಶೇಷ ರೈಲು ಸೇವೆ, ವೇಳಾಪಟ್ಟಿ ಹೀಗಿದೆ...

ನಾಡಿನೆಲ್ಲೆಡೆ ಯುಗಾದಿ ಸಂಭ್ರಮ-ಪೂಜೆ, ಹಬ್ಬದೂಟ ತಯಾರಿಯಲ್ಲಿ ಜನತೆ, ವ್ಯಾಪಾರ ಭರಾಟೆ ಜೋರು

SCROLL FOR NEXT